LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ- ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ ಭೀತಿ ಶುರುವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಡಿಸೆಂಬರ್​​ ಸೇರಿದಂತೆ ಜನವರಿಯಿಂದ ಮಾರ್ಚ್​​ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್‌ಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್‌ಗಳನ್ನು ಇರಿಸಿಕೊಳ್ಳುವುದು, ಫ್ಲೂ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್‌ಗೆ ಸೂಚಿಸಲಾಗಿದೆ.

ಇನ್ನು ಸೋಂಕಿತರ ಎಂಜಿಲಿನಿಂದ ಸೋಂಕು ಹರಡುತ್ತದೆ. ಮಕ್ಕಳು, ಹಿರಿಯರು, ಗರ್ಭಿಣಿಯರು, ಔಷಧಿಗಳ ಮೇಲೆ ಅವಲಂಬಿತರಾದವರಿಗೆ ಹೆಚ್ಚಿನ ಅಪಾಯವಿದೆ. ಸೀಸನಲ್ ಫ್ಲೂ ತಗುಲಿದರೆ ಆಸ್ಪತ್ರೆಗೆ ದಾಖಲಾಗುವ ಅಪಾಯವಿದೆ. ಹೀಗಾಗಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.

ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈ-ಕೈ ನೋವು, ಶೀತ, ಒಣ ಕೆಮ್ಮು ಇದರ ಪ್ರಮುಖ ಗುಣಲಕ್ಷಣಗಳು. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಇರಬಹುದು ಅಥವಾ ಕೆಲವೊಮ್ಮೆ 3 ವಾರಗಳ ಕಾಲ ಇರಬಹುದು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026