LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಗೋಡು ಉತ್ಸವದಲ್ಲಿ ಆರೋಗ್ಯ ಮಾಹಿತಿ ವಸ್ತು ಪ್ರದರ್ಶನ, ಆರೋಗ್ಯ ತಪಾಸಣೆ ಶಿಬಿರ ಆಕರ್ಷಣೆ


ಬಳ್ಳಾರಿ,ಫೆ.18

ಕುರುಗೋಡು ಉತ್ಸವದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಾಕಲಾಗಿದ್ದ ಆರೋಗ್ಯ ಮಾಹಿತಿ ವಸ್ತು ಪ್ರದರ್ಶನದಲ್ಲಿ ಆರೋಗ್ಯ ತಪಾಸಣೆ ಶಿಬಿರವೂ ಕೈಗೊಳ್ಳುವ ಮೂಲಕ ಜನಾಕಾರ್ಷಣೀಯವಾಗಿತ್ತು.

ವಸ್ತು ಪ್ರದರ್ಶನದಲ್ಲಿ ರಾಷ್ಟಿಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ಜೊತೆಗೆ ಆರೋಗ್ಯ ತಪಾಸಣೆ ಶಿಬಿರ ಸಹ ಹಮ್ಮಿಕೊಳ್ಳಲಾಗಿತ್ತು.

ಸಾರ್ವಜನಿಕರು ಆರೋಗ್ಯ ತಪಾಸಣೆ ಶಿಬಿರಕ್ಕೆ ಬಂದು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸುವ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನoತರ ಸಾರ್ವಜನಿಕರಿಗೆ ಅಂಗಾoಗ ದಾನದ ಮಹತ್ವದ ಕುರಿತು ಮಾಹಿತಿ ನೀಡಲಾಗಿದ್ದು, ಸುಮಾರು 100 ಜನ ಸಾರ್ವಜನಿಕರು ಅಂಗಾoಗ ದಾನಕ್ಕೆ ನೋಂದಣಿ ಮಾಡಿಸಿಕೊಂಡಿದ್ದು ವಿಶೇಷವಾಗಿತ್ತು.

ರಾಷ್ಟಿಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಆರೋಗ್ಯ ವಸ್ತು ಪ್ರದರ್ಶನದ ಮಳಿಗೆಯಲ್ಲಿ ಸಾರ್ವಜನಿಕರು ತುಂಬಾ ಆಸಕ್ತಿಯಿಂದ ವೀಕ್ಷಿಸುತ್ತಿರುವುದು ಕಂಡುಬoತು.

ಅದರಲ್ಲಿ ಪ್ರಮುಖವಾಗಿ ಸಾಂಕ್ರಾಮಿಕ ಕಾಯಿಲೆ ಮತ್ತು ಅಸಾಂಕ್ರಾಮಿಕ ಕಾಯಿಲೆಗಳಾದ ಕ್ಷಯರೋಗ, ಕುಷ್ಠರೋಗ, ತಾಯಿ ಮಕ್ಕಳ ಆರೋಗ್ಯ ಕಾರ್ಯಕ್ರಮ, 12 ಮಾರಕ ಕಾಯಿಲೆಗಳ ವಿರುದ್ದ ಲಸಿಕೆಗಳ ಬಗ್ಗೆ ಹಾಗೂ ಹೆಚ್.ಪಿ.ವಿ ಲಸಿಕೆ ಮತ್ತು ರೇಬೀಸ್ ನಿಯಂತ್ರಣ ಕುರಿತು, ಭ್ರೂಣ ಹತ್ಯೆ, ಅನಿಮೀಯ ಮುಕ್ತ ಭಾರತ, ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಬಗ್ಗೆ, ಡೆಂಗ್ಯೂ, ಚಿಕಿನ್ ಗುನ್ಯಾ, ಮಲೇರಿಯಾ, ಆನೆಕಾಲು ರೋಗ, ಎ.ಬಿ.ಪಿ.ಎಮ್.ಜೆ.ಎ.ವೈ., ಸಿ.ಎಮ್.ಎ.ಆರ್.ಕೆ ಬಗ್ಗೆ ಸಾರ್ವಜನಿಕರು ಮಾಹಿತಿ ಪಡೆದು ಪೋನ್‌ನಲ್ಲೇ ಎ.ಬಿ.ಪಿ.ಎಮ್.ಜೆ.ಎ.ವೈ., ಸಿ.ಎಮ್.ಎ.ಆರ್.ಕೆ ಕಾರ್ಡ್ ಪಡೆಯುವುದರ ಬಗ್ಗೆ ಆರ್.ಕೆ.ಎಸ್.ಕೆ ಆಪ್ತಸಮಾಲೋಚಕರಿಂದ ಮಾಹಿತಿ ಪಡೆದುಕೊಂಡರು.

ವಸ್ತು ಪ್ರದರ್ಶನದ ಮಳಿಗೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಭೇಟಿ ನೀಡಿದ್ದರು.

ಈ ವೇಳೆ ಕುರುಗೋಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜೆ.ಮಂಜುನಾಥ, ವೈದ್ಯಾಧಿಕಾರಿಗಳಾದ ಡಾ.ಲಕ್ಷö್ಮಣ್ ನಾಯ್ಕ್, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ರಫಿಕ್ ಸೇರಿದಂತೆ ಸಮುದಾಯ ಆರೋಗ್ಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರ್.ಕೆ.ಎಸ್.ಕೆ ಆಪ್ತ ಸಮಾಲೋಚಕರು ಮತ್ತು ಆಶಾಕಾರ್ಯಕರ್ತೆಯರು ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು