LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ಸಮೃದ್ಧಿ: ಎಡಿಸಿ ಮಹಮ್ಮದ್ ಎನ್.ಝುಬೇರ್

ಬಳ್ಳಾರಿ,ಡಿ.18


ಸಿರಿಧಾನ್ಯಗಳು ಪೋಷಕಾಂಶಗಳಿಂ್ ಸಮೃದ್ಧವಾಗಿದ್ದು, ಹೃದಯ ಆರೋಗ್ಯ, ಮಧುಮೇಹ ನಿಯಂತ್ರಣ ಮತ್ತು ತೂಕ ಸಮತೋಲನಕ್ಕೆ ಬಹಳ ಸಹಾಯಕವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್ ಝುಬೇರ್ ಅವರು ಹೇಳಿದರು.
ನಗರದ ಜಂಟಿ ಕೃಷಿ ನಿರ್ದೇಶಕ ಕಚೇರಿ ಆವರಣದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2025ರ ಪ್ರಯುಕ್ತ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಜನರ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಿರಿಧಾನ್ಯಗಳ ಬಳಕೆಯನ್ನು ಮತ್ತು ಸಿರಿಧಾನ್ಯ ಖಾದ್ಯಗಳ ತಯಾರಿಕೆಯನ್ನು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹಿಸಬೇಕಾಗಿದೆ. ಸಜ್ಜೆ, ಜೋಳ, ರಾಗಿ, ಮತ್ತು ನವಣೆ ಸೇರಿದಂತೆ ಮುಂತಾದ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಈ ಆಹಾರಗಳ ಲಾಭ ಉಪಯುಕ್ತತೆ ಮತ್ತು ಬಳಕೆ ಕುರಿತಂತೆ ಹೆಚ್ಚಿನ ರೀತಿಯಲ್ಲಿ ವ್ಯಾಪಕ ಅರಿವು ಮೂಡಿಸುವ ದಿಶೆಯಲ್ಲಿ ಈ ರೀತಿಯ ಸ್ಪರ್ಧೆಗಳು ಬಹಳಷ್ಟು ಉಪಯೋಗಕಾರಿ ಎಂದು ತಿಳಿಸಿದರು.
ವಿದೇಶಿ ಆಹಾರ ಪದಾರ್ಥಗಳಾದ ಪಿಜ್ಜಾ, ಬರ್ಗರ್ ಮತ್ತು ಡೊಮಿನೋಸ್ ಮತ್ತು ಎಣ್ಣೆ ಪದಾರ್ಥ ಸೇವಿಸುವುದು ಆರೋಗ್ಯ ಪೂರಕವಲ್ಲ. ಪಾಕ ಸ್ಪರ್ಧೆಗೆ ಮಾತ್ರ ಸಿರಿಧಾನ್ಯ ಪದಾರ್ಥಗಳು ಸೀಮಿತವಾಗಬಾರದು. ನಿಮ್ಮ ಮನೆಗಳಲ್ಲಿ ಸಹ ಪ್ರತಿದಿನ ಸಿರಿಧಾನ್ಯಗಳಿಂದ ವಿವಿಧ ಬಗೆಯ ಪದಾರ್ಥಗಳು ತಯಾರಿಸಿ, ನಿಮ್ಮ ಮಕ್ಕಳಿಗೆ ನೀಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಸೋಮ ಸುಂದರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್, ಎನ್.ಕೆಂಗೇಗೌಡ, ಹಗರಿ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳಾದ ಶಿಲ್ಪಾ, ರಾಜೇಶ್ವರಿ, ಬಳ್ಳಾರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎಂ.ದಯಾನಂದ ಸೇರಿದಂತೆ ಕೃಷಿ ಇಲಾಖೆ ಸಿಬ್ಬಂದಿ ವರ್ಗ ಮತ್ತು ಮಹಿಳೆಯರು ಉಪಸ್ಥಿತರಿದ್ದರು.
-----------

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು