LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಮ್ ಆದ್ಮಿ ಪಕ್ಷದ ಯುವ ಘಟಕದಿಂದ ಆರೋಗ್ಯ ಸಂಕ್ರಾಂತಿ ಆಚರಣೆ

ಬೆಂಗಳೂರು: ಆಮ್ ಆದ್ಮಿ ಪಕ್ಷದ ಯುವ ಘಟಕದಿಂದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ನೇತೃತ್ವದಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಮಕರ ಸಂಕ್ರಾಂತಿ ಹಬ್ಬವನ್ನು ಆರೋಗ್ಯ ಸಂಕ್ರಮಣ ಹೆಸರಿನಲ್ಲಿ ರೋಗಿಗಳ ಆರೈಕೆ ಮಾಡಲು ಬಂದಿರುವವರೊಂದಿಗೆ ಆಚರಿಸಲಾಯಿತು. ಸಿಹಿ ಪೊಂಗಲ್ ಹಾಗೂ ಹಣ್ಣುಗಳನ್ನು ವಿತರಿಸುವ ಮೂಲಕ ಸಾರ್ಥಕವಾಗಿ ಪಕ್ಷದ ಯುವ ಘಟಕದ ಸದಸ್ಯರು ಸಂಭ್ರಮದಿಂದ ಸಂಕ್ರಾಂತಿಯನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸುದ್ದಿಗಾರರೊಂದಿಗೆ ಮಾತನಾಡುತ್ತಾ " ಯುವ ಘಟಕದ ಸದಸ್ಯರು ತಮ್ಮ ಮನೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸುವ ಬದಲು ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಹಬ್ಬವನ್ನು ಆಚರಿಸುತ್ತಿರುವುದು ನಿಜಕ್ಕೂ ಸಾರ್ಥಕ ಕಾರ್ಯ ಹಾಗೂ ಇವುಗಳು ಇನ್ನಿತರ ರಾಜಕೀಯ ಪಕ್ಷಗಳಿಗೂ ಸಹ ಮಾದರಿಯಾಗಬೇಕು " ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಮಾತನಾಡಿ " ಇಂದು ನಾವುಗಳೆಲ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಅವರ ಸಂಬಂಧಿಕರೊಂದಿಗೆ ಹಬ್ಬವನ್ನು ಆಚರಿಸುತ್ತಿರುವುದು ನಿಜಕ್ಕೂ ಸಂತಸ ತಂದಿದೆ " ಎಂದು ತಿಳಿಸಿದರು.

ಯುವ ಘಟಕದ ಅಧ್ಯಕ್ಷ ಲೋಹಿತ್ ಹನುಮಾಪುರ ಮಾತನಾಡಿ " ಪ್ರತಿ ವರ್ಷವೂ ನಾವು ಇದೇ ರೀತಿಯ ಅನೇಕ ಸಾರ್ಥಕ ಕಾರ್ಯಗಳನ್ನು ಯುವ ಘಟಕದಿಂದ ನಡೆಸಿಕೊಂಡು ಬರುತ್ತಿದ್ದೇವೆ. ಮುಂಬರುವ ದಿವಸಗಳಲ್ಲಿ ರಾಜ್ಯದ ಯುವಜನತೆಗೆ ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತೇವೆ .ಎಲ್ಲರಿಗೂ ಉತ್ತಮ ಆರೋಗ್ಯ ಸಿಗಲೆಂದು ಈ ಮೂಲಕ ಆಶಿಸುತ್ತಿದ್ದೇನೆ " ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಡಾ. ಸತೀಶ್ ಕುಮಾರ್, ಅನಿಲ್ ನಾಚಪ್ಪ ವಿಶ್ವನಾಥ್ , ಯುವ ಘಟಕದ ಪದಾಧಿಕಾರಿಗಳಾದತೇಜಸ್ವಿನಿ , ನಾಗರತ್ನ, , ವಿಜಯ್ , ಮಂಜುನಾಥ್,ಕೀರ್ತಿ, ದೃವ, ಸೋಮು , ಹರೀಶ್, ರಾಕೇಶ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದಮಾ.21ರಂದು ರಾಮಾನಂದಾಚಾರ್ಯರ ಆಧ್ಯಾತ್ಮಿಕ ಪ್ರವಚನಗ್ರಾಮ ಸಹಾಯಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂ