ಬೆಂಗಳೂರು:
ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರ (ಸಿಎಲ್‌ಪಿ) ಸಭೆ ಇಂದು ಸಂಜೆ 6 ಗಂಟೆಗೆ ವಸಂತನಗರದಲ್ಲಿರುವ ಶಾಂಗ್ರಿ–ಲಾ ಹೋಟೆಲ್‌ನಲ್ಲಿ ನಡೆಯಲಿದೆ.
ಮಧ್ಯಾಹ್ನ 1.30ರ ವಿಮಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಲಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿರುವ ಬೆನ್ನಲ್ಲೆ ಅವರು, ದೆಹಲಿಗೆ ತೆರಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಸಿಎಲ್‌ಪಿ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರು ಭಾಗವಹಿಸಬೇಕು ಎಂದು ಕೆಪಿಸಿಸಿಯಿಂದ ಸಂದೇಶ ಕಳುಹಿಸಲಾಗಿದೆ.
ಭಾನುವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೊಣವಿನಕರೆ ಅಜ್ಜಯ್ಯ ಭೇಟಿಗೆ ತೆರಳಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.