Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಗೋವಾದಲ್ಲಿ ಕರ್ನಾಟಕ ವಾಹನಗಳಿಗೆ ಭಾರೀ ದಂಡ: ಮುಖ್ಯಮಂತ್ರಿಗೆ ಬೆನಕೆ ಮನವಿ

ಬೆಳಗಾವಿ, ಮೇ 30 : ಗೋವಾಕ್ಕೆ ಪ್ರವೇಶಿಸುವ ವಾಹನಗಳ ಮೇಲೆ, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ವಾಹನಗಳ ವಿರುದ್ಧ ಇತ್ತೀಚೆಗೆ ಜಾರಿಗೊಳಿಸಲಾಗುತ್ತಿರುವ ಭಾರೀ ಸಂಚಾರ ದಂಡಗಳ ಕುರಿತು ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಅವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಮಾಜಿ ಶಾಸಕ ಅನಿಲ ಬೆನಕೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ಅನಿಲ ಬೆನಕೆ, ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಪಾಲನೆಗಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸಾರ್ವಜನಿಕರು ಸ್ವಾಗತಿಸುತ್ತಿದ್ದಾರೆ. ಆದರೆ ಪ್ರಸ್ತುತ ಜಾರಿಯಲ್ಲಿರುವ ದಂಡ ವ್ಯವಸ್ಥೆಯ ಕೆಲವು ಅಂಶಗಳು ಸಾಮಾನ್ಯ ಪ್ರಯಾಣಿಕರು, ಪ್ರವಾಸಿಗರು ಹಾಗೂ ಸ್ಥಳೀಯ ವ್ಯಾಪಾರಿಗಳಲ್ಲಿ ಆತಂಕ ಮತ್ತು ಅಸಮಾಧಾನಕ್ಕೆ ಕಾರಣವಾಗಿವೆ ಎಂದು ತಿಳಿಸಿದ್ದಾರೆ.

ಗೋವಾ ಸಂಚಾರ ಪೊಲೀಸರು ಗೋವಾಕ್ಕೆ ಪ್ರವೇಶಿಸುವ ಪ್ರವಾಸಿ ವಾಹನಗಳ ಮೇಲೆ ಭಾರೀ ಪ್ರಮಾಣದ ದಂಡ ವಿಧಿಸುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಇಲ್ಲದಿರುವುದಕ್ಕೆ ₹10,000ರವರೆಗೆ ದಂಡ ವಿಧಿಸಲಾಗುತ್ತಿದೆ. ಈ ರೀತಿಯ ದಂಡಗಳು ಸಾಮಾನ್ಯ ವಾಹನ ಸವಾರರ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀರುತ್ತಿವೆ ಎಂದು ಅವರು ಹೇಳಿದ್ದಾರೆ.

ಪತ್ರದಲ್ಲಿ ಹಲವು ಪ್ರಮುಖ ಸಮಸ್ಯೆಗಳನ್ನು ಉಲ್ಲೇಖಿಸಿರುವ ಬೆನಕೆ, ಸ್ವಯಂಚಾಲಿತ ಡಿಜಿಟಲ್ ವ್ಯವಸ್ಥೆಗಳಲ್ಲಿನ ತಾಂತ್ರಿಕ ದೋಷಗಳಿಂದ ನಾಗರಿಕರಿಗೆ ತಪ್ಪಾದ ಇ-ಚಲನ್‌ಗಳು ಜಾರಿಯಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದಾರೆ. ವಾಹನ ಸವಾರರು ಯಾವುದೇ ಉಲ್ಲಂಘನೆ ಮಾಡದಿದ್ದರೂ ದಂಡದ ನೋಟಿಸ್‌ಗಳು ಬರುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ ಎಂದು ತಿಳಿಸಿದ್ದಾರೆ.

ಅಲ್ಲದೆ, ಅನೇಕ ಪ್ರದೇಶಗಳಲ್ಲಿ ವೇಗ ಮಿತಿ ಹಾಗೂ ವಾಹನ ನಿಲುಗಡೆ ನಿಯಮಗಳ ಕುರಿತು ಸ್ಪಷ್ಟ ಸೂಚನಾ ಫಲಕಗಳಿಲ್ಲದಿದ್ದರೂ ಅತಿ ವೇಗ ಮತ್ತು ಪಾರ್ಕಿಂಗ್ ಉಲ್ಲಂಘನೆ ಹೆಸರಿನಲ್ಲಿ ದಂಡ ವಿಧಿಸಲಾಗುತ್ತಿದೆ. ಇದರಿಂದ ಹೊರ ರಾಜ್ಯಗಳಿಂದ ಬರುವ ವಾಹನ ಸವಾರರು ಮತ್ತು ಪ್ರವಾಸಿಗರು ಗೊಂದಲಕ್ಕೆ ಒಳಗಾಗುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬಾಡಿಗೆ ಪ್ರವಾಸಿ ವಾಹನಗಳ ವಿರುದ್ಧ ಕಠಿಣ ಹಾಗೂ ಕೆಲವೊಮ್ಮೆ ಅತಿಯಾದ ದಂಡಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಗೋವಾದ ಪ್ರವಾಸೋದ್ಯಮ ಕ್ಷೇತ್ರದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತಿದೆ. ದೇಶದ ಪ್ರಮುಖ ಪ್ರವಾಸಿ ತಾಣವಾಗಿರುವ ಗೋವಾದಲ್ಲಿ ಇಂತಹ ಬೆಳವಣಿಗೆಗಳು ಪ್ರವಾಸಿಗರಲ್ಲಿ ನಕಾರಾತ್ಮಕ ಸಂದೇಶ ರವಾನಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಸಣ್ಣ ಪ್ರಮಾಣದ ಉಲ್ಲಂಘನೆಗಳಿಗೂ ಭಾರೀ ಮೊತ್ತದ ದಂಡ ವಿಧಿಸುವುದರಿಂದ ಕಡಿಮೆ ಆದಾಯದ ಕುಟುಂಬಗಳು, ದಿನಗೂಲಿ ಕಾರ್ಮಿಕರು ಹಾಗೂ ಸಾಮಾನ್ಯ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ತಡೆಗಟ್ಟುವ ಉದ್ದೇಶಕ್ಕೆ ದಂಡ ಅಗತ್ಯವಾದರೂ, ಅದು ಸಾರ್ವಜನಿಕರಿಗೆ ಅತಿಯಾದ ಹೊರೆ ಆಗಬಾರದು ಎಂದು ಬೆನಕೆ ಅಭಿಪ್ರಾಯಪಟ್ಟಿದ್ದಾರೆ.

ಆದ್ದರಿಂದ ಪಿಯುಸಿ ಪ್ರಮಾಣಪತ್ರ ನವೀಕರಣದಂತಹ ಸಣ್ಣ ಹಾಗೂ ಅಪಾಯಕಾರಿಯಲ್ಲದ ಮೊದಲ ಬಾರಿಯ ಉಲ್ಲಂಘನೆಗಳಿಗೆ ನೇರವಾಗಿ ದಂಡ ವಿಧಿಸುವ ಬದಲು ಮೊದಲ ಹಂತದಲ್ಲಿ ಎಚ್ಚರಿಕೆ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಇದರಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ನಿಯಮ ಪಾಲನೆಗೂ ಉತ್ತೇಜನ ಸಿಗಲಿದೆ ಎಂದು ತಿಳಿಸಿದ್ದಾರೆ.

ಡಾ. ಪ್ರಮೋದ ಸಾವಂತ ಅವರ ನೇತೃತ್ವದಲ್ಲಿ ಗೋವಾ ಸರ್ಕಾರ ಈ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಿ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡುವ ವಿಶ್ವಾಸವಿದೆ ಎಂದು ಅನಿಲ ಬೆನಕೆ ಪತ್ರದಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ