ಭಾರೀ ಮಳೆ ಹಿನ್ನೆಲೆ ಇಂದು 12 ರಂದು ಶಾಲೆಗಳಿಗೆ ರಜೆ.! ತುರ್ತು ಸೇವೆಗೆ ಈ ನಂಬರ್ಗೆ ಫೋನ್ ಮಾಡಿ.!
ಮಂಗಳೂರು: ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ
ಮುಂಜಾಗ್ರತಾ ಕ್ರಮವಾಗಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ತುರ್ತು ಸೇವೆ 24x7 ಲಭ್ಯವಿದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್-ಫ್ರೀ ನಿಯಂತ್ರಣ ಕೊಠಡಿ ಸಂಖ್ಯೆ 1077, ದೂರವಾಣಿ ಸಂಖ್ಯೆ 0824-2442590 ಕರೆ ಮಾಡುವಂತೆ ತಿಳಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.