LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿವಿಧೆಡೆ ಭಾರೀ ಮಳೆ ಮುಂದುವರೆದಿದ್ದು ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ.!

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರೀ ಮಳೆ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಗ್ರಾಮಾಂತರ ಭಾಗ, ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ ತಹಶೀಲ್ದಾರ್ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ಹಾಸನ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಐದು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಸಕಲೇಶಪುರ ತಾಲೂಕಿನ ಶಾಲೆಗಳು, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಹಾಸನ, ಆಲೂರು, ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ವಿಸ್ತರಿಸಲಾಗಿದೆ. ನಿರಂತರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಖಾನಾಪುರ, ಕಿತ್ತೂರು ತಾಲೂಕು ಶಾಲೆ, ಅಮಗನವಾಡಿಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ದಾಂಡೇಲಿ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಮಡಿಕೇರಿ, ಸೋಮವಾರಪೇಟೆ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎರಡು ತಾಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತದಿಂದ ರಜೆ ನೀಡಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026