ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆ.!
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆ ಆಗಲಿದ್ದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು ಕವಿದ ವಾತಾವರಣವಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು, ಪ್ರವಾಸಿಗರು ಜಲಪಾತಗಳ ಬಳಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.