LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ನು ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ಎಫ್‌ಐಡಿ ಸಂಖ್ಯೆ ಕಡ್ಡಾಯ













ಶಿವಮೊಗ್ಗ ಏ.06: ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ.

2026-27ನೇ ಸಾಲಿನ ಮುಂಗಾರು ಹಂಗಾಮಿನಿOದ ಈ ಹೊಸ ನಿಯಮ ಜಾರಿಗೆ ಬರಲಿದ್ದು, ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟವಾಗುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.

ಕೆ-ಕಿಸಾನ್ ತಂತ್ರಾ0ಶದ ಬಳಕೆ: ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಗೊಬ್ಬರ ಅಗತ್ಯವಿದೆಯೋ ಅಷ್ಟನ್ನು ಮಾತ್ರ 'ಕೆ-ಕಿಸಾನ್' ತಂತ್ರಾAಶದ ಮೂಲಕ ವಿತರಿಸಲಾಗುವುದು.

ಹೊಸ ಎಫ್‌ಐಡಿ ನೋಂದಣಿ: ಇದುವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ತಕ್ಷಣವೇ ತಮ್ಮ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕು.

ಸರ್ವೆ ನಂಬರ್ ಜೋಡಣೆ: ಈಗಾಗಲೇ ಎಫ್‌ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೆ ನಂಬರ್‌ಗಳನ್ನು ಅದಕ್ಕೆ ಜೋಡಣೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಮಾರಾಟಗಾರರಿಗೆ ಎಚ್ಚರಿಕೆ: ಅಧಿಕೃತ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾAಶದಲ್ಲಿ ರೈತರ ಎಫ್‌ಐಡಿ ನಮೂದಿಸಿಯೇ ಗೊಬ್ಬರ ಮಾರಾಟ ಮಾಡಬೇಕು. ಈ ಸಂಬ0ಧ ಇಲಾಖಾಧಿಕಾರಿಗಳಿಗೆ ತರಬೇತಿ ಹಾಗೂ ಮಾಹಿತಿ ನೀಡಲಾಗಿದೆ. ಚಿಲ್ಲರೆ ರಸಗೊಬ್ಬರ ಮಾರಾಟಗಾರರು ತಮ್ಮ ಎಲ್ಲ ಓ ಫಾರಂ ನವೀಕರಣಗೊಳಿಸಿಕೊಳ್ಳಬೇಕು. ಒಂದು ವೇಳೆ ಮಾರಾಟಗಾರರು ಓ ಫಾರಂ ಗಳ ನೋಂದಣಿ ಇಲ್ಲದೇ ಮಾರಾಟ ಮಾಡಿದಲ್ಲಿ, ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃಷಿಯೇತರ ಉದ್ದೇಶಕ್ಕೆ ಗೊಬ್ಬರ ನೀಡಿದರೆ ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.






























Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು