LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಿರುಪತಿ ತಿಮ್ಮಪ್ಪ ಭಕ್ತರಿಗೆ ಇಲ್ಲಿದೆ ಗುಡ್ ನ್ಯೂಸ್.!

 

ಹೈದರಬಾದ್: ತಿರುಪತಿ  ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಇನ್ನು ಮುಂದೆ ಸರತಿ ಸಾಲಿನಲ್ಲಿ 20 ರಿಂದ 30 ಗಂಟೆ ಕಾಯುವ ಸಂಕಷ್ಟ ತಪ್ಪಲಿದೆಯಂತೆ.!

ಹೌದು ಕೇವಲ ಮೂರು ಗಂಟೆಯೊಳಗೆ ಸಾರ್ವಜನಿಕರಿಗೆ ದರ್ಶನ ಕಲ್ಪಿಸಲು ದೇವಾಲಯದ ಆಡಳಿತ ಮಂಡಳಿ ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.!

ಭಕ್ತರಿಗೆ ಕೇವಲ ಮೂರು ಗಂಟೆಯೊಳಗೆ ಶೀಘ್ರ ದರ್ಶನ ಕಲ್ಪಿಸಲು ವಿವಿಐಪಿ ದರ್ಶನ ಮೊಟಕುಗೊಳಿಸಲಾಗುವುದು. ಈ ಮೊದಲು ಜಾರಿಯಲ್ಲಿದ್ದ ಕೈಗೆ ಬ್ಯಾಡ್ಜ್ ಹಾಕುವ ಪದ್ಧತಿ ಮರು ಜಾರಿ ಮಾಡಲಾಗುವುದು. ಸ್ಲಾಟ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವುದು ಸೇರಿದಂತೆ ಅನೇಕ ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಕಾಲ್ನಡಿಗೆಯಲ್ಲಿ ಸನ್ನಿಧಾನಕ್ಕೆ ಬರುವ ಭಕ್ತರಿಗೆ ದಿವ್ಯ ದರ್ಶನವನ್ನು ಮರು ಜಾರಿಗೊಳಿಸಲು ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ, ತಿರುಮಲದಲ್ಲಿರುವ ಅನ್ಯ ಧರ್ಮೀಯ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾಯಿಸಿ ಹಿಂದೂಗಳಿಗೆ ಮಾತ್ರ ಅವಕಾಶ ಕಲ್ಪಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು, ದರಿದ್ರ ತನ ಕಂಡು ಬರುತ್ತದೆಯೇ?ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ