LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೆಕ್ಕೆಜೋಳ ಬೆಳೆದ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ.!

 

ಬೆಂಗಳೂರು: ಕೇಂದ್ರ ಸರ್ಕಾರ ನಿಗದಿಪಡಿಸಿದ ಎಥೆನಾಲ್ ಕೋಟಾಗೆ ಅನುಗುಣವಾಗಿ ಡಿಸ್ಟಿಲರಿಗಳು ಖರೀದಿಸಬೇಕಿರುವ ಮೆಕ್ಕೆಜೋಳವನ್ನು ರೈತರಿಂದಲೇ ನೇರವಾಗಿ ಖರೀದಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಾನಸೌಧದ ಸಭಾಂಗಣದಲ್ಲಿ ಸಭೆ ನಡೆಸಿದ ಅವರು, ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು ಎಂದರು.

ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ.

ಎಥೆನಾಲ್ ಕೋಟಾ ನಿಗದಿ, ಮೆಕ್ಕೆಜೋಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಮೆಕ್ಕೆಜೋಳ ಬೆಳೆಗಾರರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.

ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು.

ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ.

ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.

ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ. ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026