ನೀವು ಬೈಕ್ ರಿಪೇರಿ ಕಲಿಬೇಕಾ ಇಲ್ಲಿದೆ ಮಾಹಿತಿ.!
ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 4 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜುಲೈ 23 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.