LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಪ್ಪಂದ... ಎಚ್‌ಇಎಸ್‌ಎಸ್‌ ಎಜಿ, ಹೆಸ್‌ (HESS) ಇಂಡಿಯಾ ಮತ್ತು ಎಸ್‌ಎಸ್‌ಬಿ ಎಜಿ ಕಂಪನಿಗಳೊಂದಿಗೆ ಸಹಿ.. ಸ್ವಿಟ್ಜರ್ಲ್ಯಾಂಡ್‌ ಗೆ ಭೇಟಿ ನೀಡಿ ಯೋಜನೆಯ ಪ್ರಾಯೋಗಿಕ ಕಾರ್ಯ ಸಾಧ್ಯತೆಯ ಬಗ್ಗೆ ಅಧ್ಯಯನ ನಡೆಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್


ಬೆಂಗಳೂರು, ಏಪ್ರಿಲ್‌ 12: ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ- ಭಾದಕಗಳ ಕುರಿತು ಚರ್ಚಿಸಲಾಯಿತು.



ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು ಅವಕಾಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಭೆಯಲ್ಲಿ ವಿವರಿಸಿದರು.



ಈ ವೇಳೆ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು ಎಚ್‌ಇಎಸ್‌ಎಸ್ ಎಜಿ, ಹೆಸ್‌ ಇಂಡಿಯಾ ಮತ್ತು ಎಸ್‌ಎಸ್‌ಬಿ ಎಜಿ ಕಂಪನಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.



ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.



ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು ನಗರದಲ್ಲಿ ಎತ್ತರಿಸಿದ ರಸ್ತೆ ಹಾಗೂ ಇತರೆಡೆ ನೆಲದ ಮೇಲೆ ಸಂಚರಿಸಲಿದೆ. ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯ ಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ.



ಮೆಟ್ರೊ ಮಾದರಿಯ ಈ ಸಂಚಾರ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಕಂಪನಿಗಳ ಪ್ರತಿನಿಧಿಗಳು ಮಾಹಿತಿ ನೀಡಿದರು.



ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.



ಈ ಸಭೆಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್‌ ಸಿ ಮಹಾದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹೆಚ್ಇಎಸ್ಎಸ್‌ ಎಜಿ ಕಂಪನಿಯ ಸುಸಾನ್ ವಾನ್ ಸುರಿ, ಎಸ್ಎಸ್‌ಬಿ ಕಂಪನಿಯ ನಿರ್ದೇಶಕ ಬುರಾಕ್ ಸೆನಸರ್ ಮತ್ತಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು