LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಬರಿಮಲೆಯ ಮಾಳಿಗಪುರದಲ್ಲಿ ತೆಂಗಿನಕಾಯಿ ಒಡೆಯುವಂತಿಲ್ಲ: ಹೈಕೋರ್ಟ್‌

ಶಬರಿಮಲೆ: ಮಾಳಿಗಪುರಂ ಕ್ಷೇತ್ರದ ಸುತ್ತುಮುತ್ತ ತೆಂಗಿನ ಕಾಯಿ ಒಡೆಯುವಿಕೆ ಮತ್ತು ಅರಶಿನ ಪುಡಿ ಸಿಂಪಡಿಸುವಿಕೆ ಶಬರಿಮಲೆ ದೇವಸ್ಥಾನದ ಸಂಪ್ರದಾಯದಲ್ಲಿ ಒಳಗೊಂಡಿಲ್ಲ ಎಂದು ಅಭಿಪ್ರಾಯಪಟ್ಟ ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ, ತೆಂಗಿನ ಕಾಯಿ ಒಡೆಯುವುದಕ್ಕೆ ನಿರ್ಬಂಧಿಸಿದೆ.

ತೆಂಗಿನಕಾಯಿ ಒಡೆಯುವಿಕೆ ಹಾಗೂ ಅರಶಿನ ಪುಡಿ ಸಿಂಪಡಿಸುವಿಕೆ ಬಗ್ಗೆ ಇದೇ ನಿಲುವನ್ನು ಕ್ಷೇತ್ರದ ತಂತ್ರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ. ಮಾತ್ರವಲ್ಲ ಮಾಳಿಗಪುರ ಪರಿಸರದಲ್ಲಿ ಕೆಲವು ಭಕ್ತರು ತಾವು ಧರಿಸಿದ ಉಡುಪುಗಳನ್ನು ಅಲ್ಲೇ ಕಳಚಿ ಉಪೇಕ್ಷಿಸಿ ಹೋಗುವುದೂ ಆಚಾರ ಕ್ರಮವಲ್ಲ. ಆದ್ದರಿಂದ ಈ ವಿಷಯವನ್ನು ಧ್ವನಿವರ್ಧಕಗಳ ಮೂಲಕ ತೀರ್ಥಾಟಕರಿಗೆ ತಿಳಿಸಬೇಕೆಂದು ಹೈಕೋರ್ಟ್‌ ನಿರ್ದೇಶನ ನೀಡಿದೆ.

ಮಂಡಲ ಕಾಲದ ತೀರ್ಥಾಟನೆ ಆರಂಭಗೊಂಡು ಮೊದಲ 12 ದಿನಗಳಲ್ಲಿ 63.01 ಕೋಟಿ ರೂ. ಸಂಗ್ರಹವಾಗಿದೆ. ಈ ಬಾರಿ ಕಳೆದ ವರ್ಷಕ್ಕಿಂತ 15.89 ಕೋಟಿ ರೂ. ಹೆಚ್ಚಳ ಉಂಟಾಗಿದೆ. ಅಪ್ಪ ಪ್ರಸಾದ ವಿತರಣೆ ಮೂಲಕ 3.53 ಕೋಟಿ ರೂ., ಅರವಣ ಮಾರಾಟದಿಂದ 28.93 ಕೋಟಿ ರೂ. ಸಂಗ್ರಹವಾಗಿದೆ. ಇದೇ ವೇಳೆ ಭಕ್ತರ ದರ್ಶನಕ್ಕಾಗಿ ಏರ್ಪಡಿಸಿದ ವರ್ಚುವಲ್‌ ಕ್ಯೂ ಯಶಸ್ವಿಯಾಗಿದೆ. ಸ್ಪಾಟ್‌ ಬುಕ್ಕಿಂಗ್‌ ಮೂಲಕ ಗರಿಷ್ಠ ಸಂಖ್ಯೆಯ ಭಕ್ತರಿಗೆ ದರ್ಶನ ಸೌಕರ್ಯ ಏರ್ಪಡಿಸುವುದಾಗಿ ತಿರುವಾಂಕೂರ್‌ ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್‌.ಪ್ರಶಾಂತ್‌ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ಸಾವರಾರು ಗಮನಿಸ ಬೇಕಾದ ಸುದ್ದಿ.! ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್ ಬಗ್ಗೆ ಹೆಚ್ಚಿನ ಮಾಹಿತಿ.!ವಚನ: --ಚೆನ್ನಬಸವಣ್ಣ .!ಬಸವ ನಾಡಿನಲ್ಲಿ ಬುದ್ದ ಸ್ಮರಣೆ: ಟಿಬೆಟ್ ಯನ್ನರ ಪಾದಾಯಾತ್ರೆ.!ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!