LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಬರಿಮಲೆಯಲ್ಲಿ ನಟನಿಗೆ ವಿಶೇಷ ದರ್ಶನ ಸೌಲಭ್ಯ : ಹೈಕೋರ್ಟ್‌ ಗರಂ

ಕೊಚ್ಚಿ : ಶಬರಿಮಲೆಯಲ್ಲಿ ಮಲಯಾಳಂ ನಟ ದಿಲೀಪ್‌ಗೆ ವಿಶೇಷ ಸೌಲಭ್ಯಕ್ಕೆ ಒದಗಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್ ಪೊಲೀಸ್ ಇಲಾಖೆ ಮತ್ತು ತಿರುವಾಂಕೂರು ದೇವಸ್ವಂ ಬೋರ್ಡನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿದೆ.

ನ್ಯಾ.ಅನಿಲ್ ಕೆ. ನರೇಂದ್ರನ್ ಮತ್ತು ನ್ಯಾ.ಮುರಳಿ ಕೃಷ್ಣ ಎಸ್. ಅವರಿಂದ ದ್ವಿಸದಸ್ಯ ಪೀಠ, ನಟನಿಗೆ ಯಾವ ಆಧಾರದ ಮೇಲೆ ವಿಶೇಷ ದರ್ಶನ ಅವಕಾಶ ನೀಡಲಾಯಿತು ಎಂದು ಪ್ರಶ್ನಿಸಿದೆ. ದಿಲೀಪ್ ದರ್ಶನ ಪಡೆದ ದಿನದ ಸಿಸಿಟಿವಿ ದೃಶ್ಯಾವಳಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಪೊಲೀಸರಿಗೆ ಆದೇಶಿಸಿದೆ.



ನಟನಿಗೆ ವಿಶೇಷ ಸೌಲಭ್ಯ ನೀಡಿರುವುದರಿಂದ ಬೇರೆ ಭಕ್ತರಿಗೆ ದರ್ಶನಕ್ಕೆ ಅಡ್ಡಿಯಾಗುವುದಿಲ್ಲವೇ? ಭಕ್ತರ ಸಾಲಿನಲ್ಲಿ ಮಕ್ಕಳು ಮತ್ತು ವೃದ್ಧರು ಇರುತ್ತಾರೆ. ಅವರು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಲ್ಲು ಸಾಧ್ಯವೇ? ಅನೇಕರು ದರ್ಶನ ಪಡೆಯದೆ ಹಾಗೆಯೇ ತೆರಳಿದ್ದಾರೆ. ಅವರೆಲ್ಲ ಯಾರ ಬಳಿ ದೂರು ಸಲ್ಲಿಸಬೇಕು ಎಂದು ಹೈಕೋರ್ಟ್ ಚಾಟಿ ಬೀಸಿದೆ.ನ್ಯಾಯಾಲಯದ ಆದೇಶದಂತೆ ಸಾಂವಿಧಾನಿಕ ಅಧಿಕಾರ ಹೊಂದಿರುವವರು ಮಾತ್ರ ಈ ರೀತಿಯ ವಿಶೇಷ ಸವಲತ್ತುಗಳನ್ನು ಶಬರಿಮಲೆಯಲ್ಲಿ ಪಡೆಯಬಹುದು. ಡಿ.5ರಂದು ನಟ ದಿಲೀಪ್‌ಗೆ ನೀಡಿದ ವಿಶೇಷ ದರ್ಶನದಿಂದ ಕಾನೂನು ಉಲ್ಲಂಘನೆ ಆಗಿದೆ ಎಂದು ಅಭಿಪ್ರಾಯಪಟ್ಟಿದೆ.

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ದೇವರ ದರ್ಶನಕ್ಕಾಗಿ ಡಿ.5ರಂದು ಹಲವು ಗಂಟೆಗಳ ಕಾಲ ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ಕಾಯುತ್ತಿದ್ದರು. ಈ ವೇಳೆ ಸೇರಿದ್ದ ಭಕ್ತರನ್ನು ತಡೆದು ದಿಲೀಪ್‌ಗೆ ವಿಶೇಷ ಪೂಜೆ ಸಲ್ಲಿಸಲು ದೇವಸ್ಥಾನದ ಆಡಳಿತ ಮಂಡಳಿ ಅವಕಾಶ ನೀಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು.ಸುದ್ದಿಯೊಂದನ್ನು ಆಧರಿಸಿ ಹೈಕೋರ್ಟ್, ಸ್ವಯಂ ಪ್ರೇರಿತವಾಗಿ ಈ ಪ್ರಕರಣವನ್ನು ಕೈಗೆತ್ತಿಕೊಂಡು ಸರ್ಕಾರಕ್ಕೆ ಚಾಟಿ ಬೀಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!ಶನಿ ಚಲನೆಯಿಂದ ತ್ರಿಕೇದಶ ಯೋಗ: ಹಣ, ಮನೆ, ಕೌಟುಂಬಿಕ ಸಮಸ್ಯೆ ದೂರ! ಯಾರಿಗೆಲ್ಲಾ ನೋಡಿ!ಕರ್ನಾಟಕ ಸಾರಿಗೆ ನಿಗಮದ ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ರೆಡಿ.!ಬಳ್ಳಾರಿ: ಕಿತ್ತೂರುರಾಣಿ ಚೆನ್ನಮ್ಮ ಪದವಿಪೂರ್ವ ಕಾಲೇಜಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!12-08-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ..!ವಚನ: -ಸಿದ್ಧರಾಮೇಶ್ವರ .!ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅಂಬೇಡ್ಕರ್.! ಹೆಚ್. ಆಂಜನೇಯಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆ: ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ; ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆಧರ್ಮಸ್ಥಳದಲ್ಲಿ ತನಿಖೆ; ಧರ್ಮ ದ್ರೋಹಿ ಚಟುವಟಿಕೆ.! ಎಸ್ ಲಿಂಗಮೂರ್ತಿ