Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಜೀವರಾಜ್ ವಿರುದ್ಧದ FIRಗೆ ಹೈಕೋರ್ಟ್ ತಾತ್ಕಾಲಿಕ ತಡೆ – ಪೋಸ್ಟಲ್ ಮತ ವಿವಾದ

ಬೆಂಗಳೂರು/ಚಿಕ್ಕಮಗಳೂರು: ಅಂಚೆ ಮತ ತಿರುಚಿದ ಆರೋಪದ ಹಿನ್ನೆಲೆ ಶೃಂಗೇರಿ ಶಾಸಕ ಜೀವರಾಜ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಶ್ರೀಶಾನಂದ ಅವರ ರಜಾ ಪೀಠ ಇಂದು (ಮೇ 5) ಅರ್ಜಿಯನ್ನು ವಿಚಾರಣೆ ನಡೆಸಿ, ಸರ್ಕಾರದ ಕ್ರಮದ ಬಗ್ಗೆ ಎಸ್‌ಪಿಪಿ ಬೆಳ್ಳಿಯಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. 2023ರ ಮೇ 13ರಂದು ನಡೆದ ಘಟನೆಗೆ ಈಗ ಎಫ್‌ಐಆರ್ ದಾಖಲಿಸುವುದು ಹೇಗೆ ಸಾಧ್ಯ? ಟ್ಯಾಂಪರಿಂಗ್ ಬಗ್ಗೆ ಕೋರ್ಟ್‌ಗೆ ತಿಳಿಸದೆ ಪ್ರಕರಣ ದಾಖಲಿಸಿದ್ದೀರಾ? ಸೋತವರು ಒಳಸಂಚು ಮಾಡುತ್ತಾರೆ ಎಂಬ ಅನುಮಾನ ಇದೆ. ತನಿಖಾಧಿಕಾರಿಯನ್ನು ಕೋರ್ಟ್ ಮುಂದೆ ಹಾಜರುಪಡಿಸಿ, ನಿಮಗೆ ವಿಚಾರ ಗೋಚರವಾಗುತ್ತಿಲ್ಲವೇ? ಸಸ್ಪೆಂಡ್ ಮಾಡಬೇಕಾ ಎಂದು ನ್ಯಾಯಾಧೀಶರು ಕಠಿಣವಾಗಿ ಪ್ರಶ್ನಿಸಿದರು.

2023ರಲ್ಲಿ ಸೇವೆ ಸಲ್ಲಿಸಿದ್ದ ಜಿಲ್ಲಾಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ಏಕೆ? ನಿಮ್ಮ ಎಫ್‌ಐಆರ್ ಓದಿದರೆ ಅದರ ಒಳಾರ್ಥ ಸ್ಪಷ್ಟವಾಗುತ್ತದೆ. ಈಗಿನ ಚುನಾವಣಾಧಿಕಾರಿ ಗೌರವ್ ಶೆಟ್ಟಿ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ರಾಜಕೀಯ ಒತ್ತಡಕ್ಕೆ ಒಳಗಾಗಿ ಪೊಲೀಸರು ಪ್ರಕರಣ ದಾಖಲಿಸಬಾರದು. ಹೈಕೋರ್ಟ್ ಆದೇಶದ ಮೇರೆಗೆ ಅಂಚೆ ಮತಗಳ ಎಣಿಕೆ ನಡೆದಿತ್ತು. ಸೀಲ್ ಇಲ್ಲದಿದ್ದರೆ ಅಥವಾ ಡಬಲ್ ಟಿಕ್ ಕಂಡುಬಂದಿದ್ದರೆ, ಅದನ್ನು ಕೋರ್ಟ್ ಗಮನಕ್ಕೆ ತರುವುದಿಲ್ಲವೇ? ಎಂದು ನ್ಯಾಯಮೂರ್ತಿ ಎಸ್‌ಪಿಪಿ ಬೆಳ್ಳಿಯಪ್ಪ ಅವರನ್ನು ತರಾಟೆಗೆ ತೆಗೆದುಕೊಂಡರು. ರಾಜೇಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಕೂಡ ತಡೆ ನೀಡುತ್ತಿದ್ದೆ ಎಂದು ಸೂಚಿಸಿದ ನ್ಯಾಯಾಧೀಶರು, ಪ್ರಜಾಪ್ರತಿನಿಧಿಗಳ ಕಾಯ್ದೆಯಡಿ ಜಿಲ್ಲಾಧಿಕಾರಿ ವಿರುದ್ಧ ಪ್ರಕರಣ ದಾಖಲಿಸಲು ಅವಕಾಶವಿಲ್ಲವೆಂದು ಅಭಿಪ್ರಾಯಪಟ್ಟರು. ದೂರುದಾರ ಸುಧೀರ್‌ಗೆ ನೋಟಿಸ್ ಜಾರಿಗೊಳಿಸಿ, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿದರು. ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ