ಬೆಂಗಳೂರು :
ಹಾಸನ ಲೋಕಸಭಾ ಸದಸ್ಯ ಮತ್ತು ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ನ್ಯಾಯವಾದಿ ದೇವರಾಜೇಗೌಡ ಅವರು ಪ್ರಜ್ವಲ್ ರೇವಣ್ಣ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಶುಕ್ರವಾರ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಕೆ. ನಟರಾಜನ್ ನೇತೃತ್ವದ ಪೀಠ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದೆ.
ಜೊತೆಗೆ ಅಕ್ರಮ ಎಸಗಿರುವುದರಿಂದ ತಮ್ಮನ್ನು ವಿಜೇತ ಅಭ್ಯರ್ಥಿ ಎಂದು ಕೋರಿದ್ದ ಬಿಜೆಪಿ ಅಭ್ಯರ್ಥಿ ಎ. ಮಂಜು ಅವರ ಮನವಿ ಪುರಸ್ಕರಿಸಲು ನ್ಯಾಯಾಲಯ ನಿರಾಕರಿಸಿದೆ. ಅರ್ಜಿದಾರರು ಚುನಾವಣಾ ಅಕ್ರಮ ಎಸೆಗಿರುವುದರಿಂದ ಅವರನ್ನು ವಿಜೇತ ಅಭ್ಯರ್ಥಿ ಎಂದು ಘೋಷಿಸಲಾಗದು ಎಂದು ನ್ಯಾಯಾಲಯ ಘೋಷಿಸಿದೆ. ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಇದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.