ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್.!
ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್..! ಜೂ.6 ರಂದು ವಿಚಾರಣೆಗೆ ಹಾಜರಾಗಲು ಸೂಚನೆ.!
ಪುತ್ತೂರಿನ ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರುವ ಮಾಡುವ ಆದೇಶ ಹೊರಡಿಸುವ ಕುರಿತು ಜೂನ್ 6ರಂದು ವಿಚಾರಣೆಗೆ ಹಾಜರಾಗಲು ಪುತ್ತೂರು ಉಪವಿಭಾಗದ ದಂಡಾಧಿಕಾರಿಯಾದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ: 58ರಡಿ ಈ ನೋಟಿಸ್ ಜಾರಿ ಮಾಡಲಾಗಿದೆ.
ನೋಟೀಸ್ ನಲ್ಲಿನ ಏನಿದೆ….?
ಅರುಣ್ ಕುಮಾರ್ ಪುತ್ತಿಲ ಪ್ರಾಯ: 54 ವರ್ಷ ತಂದೆ: ಕೃಷ್ಣಯ್ಯ ವಾಸ: ಮತ್ತಿಲ ಮನೆ ಮುಂಡೂರು ಗ್ರಾಮ ಪುತ್ತೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 6ರಂದು ನಿಗದಿಪಡಿಸಿದೆ. ಆದ್ದರಿಂದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ಸೂಚಿಸಲಾಗಿದೆ.
ಈ ಪ್ರಕರಣದಲ್ಲಿ ನೀವು ಸ್ವತಃ ಅಥವಾ ನ್ಯಾಯವಾದಿಯ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದು. ವಿಚಾರಣೆಗೆ ಹಾಜರಾಗದಿದ್ದಲ್ಲಿ ಈ ಬಗ್ಗೆ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.