Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿರಿಯೂರು ನಗರಸಭೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಭೆ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಅಂಗವಾಗಿ ಹಿರಿಯೂರು ನಗರಸಭಾ ವ್ಯಾಪ್ತಿಯ ವಾರ್ಡ್ ನಂಬರ್ 8ರ ಮತಗಟ್ಟೆ ಸಂಖ್ಯೆ 165
, 166, 167 ಮತ್ತು 168ರ ವ್ಯಾಪ್ತಿಯಲ್ಲಿ ಪತ್ತೆಯಾಗದ ಮತದಾರರಪರಿಶೀಲನಾ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು.

ನಗರಸಭೆ ಪೌರಾಯುಕ್ತರಾದ ಎ.ವಾಸೀಂ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ವಿಶೇಷ ಸಭೆಯಲ್ಲಿ ಮತಗಟ್ಟೆ ಮಟ್ಟದ ಮೇಲ್ವಿಚಾರಕರು, ಸಂಬಂಧಪಟ್ಟ ಬಿಎಲ್‌ಒಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಸಭೆಯಲ್ಲಿ ಮತದಾರರ ಪಟ್ಟಿ ಹಾಗೂ ಎನ್ಯೂಮರೇಷನ್ ಫಾರ್ಮ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಪತ್ತೆಯಾಗದ ಮತದಾರರನ್ನು ಗುರುತಿಸುವ ಪ್ರಕ್ರಿಯೆ ನಡೆಸಲಾಯಿತು.

ನಕಲಿ/ತಪ್ಪು ದಾಖಲಾತಿ ತಡೆಗೆ ಸಲಹೆ:
ಸಭೆಯಲ್ಲಿ ಮಾತನಾಡಿದ ಪೌರಾಯುಕ್ತರಾದ ಎ. ವಾಸಿಂ ಅವರು, "ವಿಶೇಷ ಸಮಗ್ರ ಪರಿಷ್ಕರಣೆಯ ಮುಖ್ಯ ಉದ್ದೇಶ ಪ್ರತಿಯೊಬ್ಬ ಅರ್ಹ ಮತದಾರರಿಗೂ ಹಕ್ಕು ಕಲ್ಪಿಸುವುದು ಮತ್ತು ಪಟ್ಟಿಯಲ್ಲಿರುವ ದೋಷಗಳನ್ನು ತಿದ್ದುಪಡಿ ಮಾಡುವುದಾಗಿದೆ" ಎಂದು ತಿಳಿಸಿ, ಪ್ರಕ್ರಿಯೆಯ ಕುರಿತು ಉಪಸ್ಥಿತರಿದ್ದ ಎಲ್ಲರಿಗೂ ಸಂಪೂರ್ಣ ಮಾಹಿತಿ ಹಾಗೂ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.

ತದನಂತರ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರಾದ ಜುನೇದ್ ಸಿರಾಜ್ ಎಸ್. ಅವರು ಮಾತನಾಡಿ, ಎನ್ಯೂಮರೇಷನ್ ಫಾರ್ಮ್‌ಗಳನ್ನು ಭರ್ತಿ ಮಾಡುವಾಗ ಸಾಮಾನ್ಯವಾಗಿ ಆಗುವ ತಪ್ಪುಗಳನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎಂಬುದನ್ನು ವಿವರಿಸಿದರು.

ತಾರ್ಕಿಕ ವ್ಯತ್ಯಾಸಗಳಿಂದ ನೋಟಿಸ್ ಬಂದಲ್ಲಿ ಸಲ್ಲಿಸಬೇಕಾದ ಅಧಿಕೃತ ದಾಖಲಾತಿಗಳ ಕುರಿತು ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ ನೀಡಿದರು.

ಜನರಲ್ಲಿನ ಆತಂಕ ನಿವಾರಣೆ:
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪಿ.ಎಸ್. ಸಾದತ್ ಉಲ್ಲಾ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಇರುವ ಅನಗತ್ಯ ಗೊಂದಲ ಹಾಗೂ ಆತಂಕಗಳನ್ನು ಹೋಗಲಾಡಿಸಿ, ನಿಖರ ಮತ್ತು ಸರಿಯಾದ ಮಾಹಿತಿಯನ್ನು ಒದಗಿಸಿದರು.

ಶತಪ್ರತಿಶತ ಸಾಧನೆ ಮಾಡಿದ ಬಿಎಲ್‌ಒಗಳಿಗೆ ಅಭಿನಂದನೆ:
ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಶೇಕಡಾ 100ಕ್ಕೂ ಹೆಚ್ಚು ಪ್ರಗತಿ ಸಾಧಿಸಿ, ಯಶಸ್ವಿಯಾಗಿ ಪರಿಷ್ಕರಣೆ ಮುಕ್ತಾಯಗೊಳಿಸಿದ ಇಬ್ಬರು ಬಿಎಲ್‌ಒ ಅಧಿಕಾರಿಗಳಾದ ಟಿ. ಚಂದ್ರಕಲಾ ಮತಗಟ್ಟೆ ಸಂಖ್ಯೆ 165 ಮತ್ತು ಪಿ. ಕೆ. ನವೀನ್ ಮತಗಟ್ಟೆ ಸಂಖ್ಯೆ 166 ಇವರನ್ನು ಈ ಸಂದರ್ಭದಲ್ಲಿ ಗೌರವಿಸಿ, ಹೃದಯಪೂರ್ವಕ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಾರ್ಡಿನ ಮುಖಂಡರುಗಳಾದ ಎಚ್. ಅಬ್ದುಲ್ ನಬಿ, ಎ. ಭಾಷಾ, ಸೂರ್ಯೋದಯ ಅಜೀಜ್, ಆಜಾದ್ ದಾದು, ಎಲ್. ಮೊಹಮ್ಮದ್ ಸ್ವಾಲೆಹ್, ಎ. ಪುಳಿ ದಸ್ತಗೀರ್, ಸೈಫುಲ್ಲಾ, ಡಿಶ್ ಸಮೀರ್, ತಿಪ್ಪೇಸ್ವಾಮಿ, ರಾಧಾ ಹಾಗೂ ಹಲವಾರು ನಾಗರಿಕರು ಹಾಜರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ