ಬೆಳಗಾವಿ ನಗರ ಮತ್ತು ಗ್ರಾಮೀಣ ಪ್ರದೇಶದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೂ ರಜೆ
ಬೆಳಗಾವಿ ನಗರ ಮತ್ತು ಗ್ರಾಮೀಣ ಪ್ರದೇಶದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೂ ರಜೆ ಘೋಷಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಅಂಗನವಾಡಿ ಕೇಂದ್ರಗಳಿಗೂ ರಜೆ:ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳಿಗೂ ಬುಧವಾರ (ಜು.26) ರಜೆ ಘೋಷಿಸಲಾಗಿರುತ್ತದೆ.
- ಬೆಳಗಾವಿ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಶಾಲೆಗಳಿಗೆ ಬುಧವಾರ(ಜು.26) ರಜೆ ಘೋಷಣೆ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಶಾಲೆಗಳ ಜತೆಗೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.