LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹ ಸಚಿವ ಪರಮೇಶ್ವರ್‌ಗೆ ಬೆಳ್ಳಂಬೆಳಗ್ಗೆ ಇ.ಡಿ.ಶಾಕ್‌ : ಮೆಡಿಕಲ್‌ ಕಾಲೇಜಿಗೆ ದಾಳಿ

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಇ.ಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಇಂಜಿನಿಯರಿಂಗ್‌ ಕಾಲೇಜು ಅಲ್ಲದೆ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ.



ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.

ಕೋಟಿಗಟ್ಟಲೆ ಮೊತ್ತದ ಚಿನ್ನ ದುಬೈಯಿಂದ ಕಳ್ಳದಾರಿಯಲ್ಲಿ ತಂದ ಪ್ರಕರಣಕ್ಕೆ ಸಂಬಂಧಿಸಿ ಸೆರೆಯಾಗಿ ಕೆಲವು ತಿಂಗಳಿಂದ ಜೈಲಿನಲ್ಲಿದ್ದ ರನ್ಯಾ ರಾವ್‌ಗೆ ನಿನ್ನೆಯಷ್ಟೇ ನ್ಯಾಯಾಲಯ ಜಾಮೀನು ನೀಡಿತ್ತು. ಇದರ ಬೆನ್ನಿಗೆ ಇಂದು ಗೃಹ ಸಚಿವರ ಮೆಡಿಕಲ್‌ ಕಾಲೇಜಿಗೇ ಇ.ಡಿ. ದಾಳಿಯಾಗಿರುವುದು ಭಾರಿ ಕುತೂಹಲ ಕೆರಳಿಸಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿನಲ್ಲಿ ಕೆಲವು ಸಚಿವರ ಕೈವಾಡ ಇದೆ ಎಂದು ಆರಂಭದಿಂದಲೂ ಗುಸುಗುಸು ಕೇಳಿಬರುತ್ತಿತ್ತು. ಆದರೆ ರಾಜ್ಯ ಸರಕಾರ ಈ ಪ್ರಕರಣದ ತನಿಖೆಗೆ ಹೆಚ್ಚಿನ ಕಾಳಜಿ ತೋರಿಸಿಲ್ಲ ಎಂದು ಆರೋಪವಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026