Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹುಕ್ಕೇರಿ ಹಿರೇಮಠದಲ್ಲಿ ಹೆಬ್ಬಾಳ್ಕರ್ ಗೆ ಸನ್ಮಾನ

 

ಬೆಳಗಾವಿ :
ಮಠ ಮಾನ್ಯಗಳನ್ನು ಬೆಳೆಸುವಂಥ ಸಂಸ್ಕೃತಿ ನಮ್ಮ ದೇಶದ್ದು. ಮಠಗಳನ್ನು ಬೆಳೆಸಿದರೆ ನಾವು ಉಳಿಯುತ್ತೇವೆ ಎನ್ನುವ ಸತ್ಯಾಂಶ ನನಗೆ ಗೊತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಲಕ್ಷ್ಮೀ ಟೇಕಡಿಯ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ಜರುಗುವ 68 ನೇ ಮಾಸಿಕ ಸುವಿಚಾರ ಚಿಂತನೆಯ ಅಂಗವಾಗಿ ಗುರು ಪೂರ್ಣಿಮೆ ಹಾಗೂ ದಿವ್ಯ ಸತ್ಸಂಗ ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ನಾಡಿನಲ್ಲಿ ಮಠಗಳು ಇದ್ದರೇ ಸಮಾಜ ಸದೃಢವಾಗುತ್ತದೆ. ನಮ್ಮ ಸಮಾಜದಲ್ಲಿ ಯುವಕರು ನಮ್ಮನ್ನು ಸುಧಾರಿಸಲು ಸಿದ್ಧವಾಗುತ್ತಾರೆ ಎನ್ನುವ ಸಾಮಾನ್ಯ ಪರಿಕಲ್ಪನೆ ನನಗೆ ಇದೆ. ನಾನು ಖಂಡಿತವಾಗಿಯೂ ನಮ್ಮ ಸರಕಾರದ ಪ್ರಣಾಳಿಕೆಯಲ್ಲಿ ತಿಳಿಸಿದ್ದೇವೆ. ಮಠಗಳನ್ನು ಬೆಳೆಸಲು ಕೋಟ್ಯಂತರ ರೂ. ಮೀಸಲಿಟ್ಟಿದ್ದೇವೆ. ನಾನು ಹುಕ್ಕೇರಿ ಹಿರೇಮಠ ಹಾಗೂ ಬೇರೆ ಮಠಗಳ ಜೀರ್ಣೋದ್ಧಾರಕ್ಕೆ ನಾನು ಟೊಂಕ ಕಟ್ಟಿ ನಿಲ್ಲುತ್ತೇನೆ. ವಿಶೇಷವಾಗಿ ಹುಕ್ಕೇರಿ ಹಿರೇಮ ಠದ ಶಾಖಾ ಮಠದ ಕಟ್ಟಡ ಕಟ್ಟುವಲ್ಲಿ ಯಶಸ್ವಿಯಾಗುತ್ತೇನೆ. ಆದಷ್ಟು ಬೇಗ ಎಲ್ಲರೂ ಸೇರಿಕೊಂಡು ಈ ಮಠವನ್ನು ಪೂರ್ಣಗೊಳ್ಳಿಸುತ್ತೇವೆ ಶ್ರೀಗಳಿಗೆ ಮಾತು ನೀಡಿದರು.

ಬಿಡುವಿಲ್ಲದ ಸಂದರ್ಭದಲ್ಲಿ ಮಠ ಮಾನ್ಯಗಳ ಸ್ವಾಮೀಜಿ, ಸಂತರು ಹೇಳಿದ ಮಾತುಗಳನ್ನು ಎಂದಿಗೂ ನಾನು ಪಾಲಿಸಿಕೊಂಡು ಬಂದಿದ್ದೇನೆ. ಬಹುಶಃ ನಾನು ಜೀವನದಲ್ಲಿ ಯಶಸ್ಸು ಕಾಣಲು ಅದು ಒಂದು ಕಾರಣ. ತಾವುಗಳು ಬಿಡುವಿನ ಸಮಯದಲ್ಲಿ ತಮ್ಮ ಮಕ್ಕಳಿಗೆ ನಮ್ಮ ಸಂಸ್ಸೃತಿಯನ್ನು ಹೇಳುತ್ತಾ ಹೋದರೆ ನಮ್ಮ ಸಮಾಜ ಸಡೃಢವಾಗಿ ನಿಲ್ಲುತ್ತದೆ. ಎಲ್ಲರೂ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯೋಣ ಎಂದರು.

ಸಾನಿಧ್ಯ ವಹಿಸಿದ್ದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ತಾಳ್ಮೆಯ ಪ್ರತೀಕವೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಿದ್ದಾರೆ. ಅಧಿಕಾರ, ಅಧಿಕಾರ ಮಾಡಲು ಅಲ್ಲ. ಅಧಿಕಾರ ಮಾಡಿದರೆ ಒಮ್ಮೊಮ್ಮೆ ಬೇಸರವಾಗುತ್ತದೆ. ಅಧಿಕಾರ ಅನ್ನುವುದು ಒಂದು ಅವಕಾಶ. ಈ ಅವಕಾಶವನ್ನು ಬಳಕೆ ಮಾಡಿಕೊಳ್ಳುವುದು ಹೇಗೆ ಎಂದರೆ ತಾಳ್ಮೆಯಿಂದ ಇರುವುದು. ಇಂದಿನಿಂದ ಯಾವುದೇ ಒತ್ತಡದಲ್ಲಿ ಕೆಲಸ ಮಾಡಬೇಡಿ. ಸದಾ ಲವಲವಿಕೆಯಿಂದ ಮಾಡಿ. ಲವಲವಿಕೆಯಿಂದ ಮಾಡಿದರೆ ಎಲ್ಲ ಕೆಲಸ ಸುಲಭವಾಗಿ ಮಾಡಬಹುದು. ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಹೆಬ್ಬಾಳ್ಸರ್ ಗೆ ಶ್ರೀಗಳು ಕಿವಿಮಾತು ಹೇಳಿದರು.

ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು ಸುಮಾರು ಮೂರು ಕೋಟಿ ರೂ. ವೆಚ್ಚವಾಗಿದೆ. ಹದಿಮೂರು ಕೋಟಿ ಅಂದಾಜಿಲಾಗಿದೆ. ಸರಕಾರದ ಗಮನ ಸೆಳೆದು ಈ ಮಠವನ್ನು ಪೂರ್ಣ ಮಾಡುವುದು ನಿಮ್ಮ ಜವಾಬ್ದಾರಿ ಎಂದರು.

ರಾಜ್ಯ ಸರಕಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜವಾಬ್ದಾರಿ ನೀಡಿದೆ. ರಾಜ್ಯದ ಅಭಿವೃದ್ಧಿ ಮಾಡುವುದರ ಜೊತೆ ಜೊತೆಗೆ ಬೆಳಗಾವಿ ಜಿಲ್ಲೆಗೆ ಹೆಸರು ತಂದು ಕೊಡುವ ಕೆಲಸವನ್ನು ಹೆಬ್ಬಾಳ್ಕರ್ ಅವರು ಮಾಡಲಿ ಎಂದು ಶ್ರೀಗಳು ಶುಭ ಹಾರೈಸಿದರು.

ಅರವಿಂದ ಅವರಿಗೆ ಹುಕ್ಕೇರಿ ಹಿರೇಮಠದ ಗುರುಕಾರುಣ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರದಾನ ಮಾಡಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಹುಕ್ಕೇರಿ ಹಿರೇಮಠದಿಂದ ಗೌರವಿಸಲಾಯಿತು.

ಬುಡಾ ಮಾಜಿ ಅಧ್ಯಕ್ಷ ಯುವರಾಜ ಕದಂ, ವಿರುಪಾಕ್ಷಯ್ಯ ನೀರಲಗಿಮಠ, ಚಂದ್ರಶೇಖರ ಸಾಲಿಸವಡಿಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ