Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪಿರಿಯಾಪಟ್ಟಣ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾ*ವು, 35ಕ್ಕೂ ಹೆಚ್ಚು ಮಂದಿಗೆ ಗಾಯ

ಕಾವೇರಿ ಖಾಸಗಿ ಸ್ಲೀಪರ್ ಬಸ್‌ಗೆ ಲಾರಿ ಡಿಕ್ಕಿ; ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ

news_1792146527_0_156.webp

ಪಿರಿಯಾಪಟ್ಟಣ: ಪಟ್ಟಣದ ಹೊರವಲಯದ ಕಿರನಲ್ಲಿ ಗೇಟ್ ಬಳಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಕೇರಳದತ್ತ ತೆರಳುತ್ತಿದ್ದ ಕಾವೇರಿ ಹೆಸರಿನ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ತುರ್ತು ಬಾಗಿಲು ತೆರೆದು ಪ್ರಯಾಣಿಕರ ರಕ್ಷಣೆ

ಅಪಘಾತದ ತೀವ್ರತೆಗೆ ಬಸ್ ಜಖಂಗೊಂಡಿದ್ದು, ಹಲವು ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ನಿವಾಸಿಗಳು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್‌ನ ತುರ್ತು ಬಾಗಿಲು ತೆರೆದು ಒಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದು ಗಾಯಾಳುಗಳನ್ನು ರಕ್ಷಿಸಲಾಯಿತು.

ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಒಂದು ಕಾಲು ಬಸ್‌ನೊಳಗೆ ಸಿಲುಕಿಕೊಂಡಿದ್ದರಿಂದ ಮೃತದೇಹವನ್ನು ಹೊರತೆಗೆಯಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಲಾರಿ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗಾಯಾಳುಗಳನ್ನು ಆಂಬುಲೆನ್ಸ್‌ಗಳ ಮೂಲಕ ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಕೆಲ ಪ್ರಯಾಣಿಕರಿಗೆ ಬೆನ್ನುಮೂಳೆ, ಕೈಕಾಲು, ಸೊಂಟ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರು ಕೇರಳ ಮೂಲದವರೆಂದು ಗುರುತಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿಯನ್ನು ವೈದ್ಯರು ಪರಿಶೀಲಿಸಿ ಚಿಕಿತ್ಸೆ ಮುಂದುವರಿಸಿದ್ದಾರೆ.

ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ, ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು. ಬಳಿಕ ಕ್ರೇನ್ ಹಾಗೂ ಜೆಸಿಬಿ ಯಂತ್ರಗಳ ನೆರವಿನಿಂದ ಅಪಘಾತಕ್ಕೀಡಾದ ಬಸ್ ಮತ್ತು ಲಾರಿಯನ್ನು ರಸ್ತೆಯ ಬದಿಗೆ ಸ್ಥಳಾಂತರಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಸ್ಥಳಕ್ಕೆ ಎಸ್ಪಿ ಭೇಟಿ, ಪರಿಶೀಲನೆ

ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಅಪಘಾತಕ್ಕೆ ಯಾರ ತಪ್ಪು ಕಾರಣವಾಗಿದೆ ಎಂಬುದು ತನಿಖೆಯ ಬಳಿಕ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಅಪಘಾತದ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST