*ಹೊಸಪೇಟೆ:(ವಿಜಯನಗರ):* ನಗರದ ಥಿಯೋಸಾಫಿಕಲ್ ಕಾಲೇಜಿನಲ್ಲಿ ಸುಮಾರು 500 ವಿದ್ಯಾರ್ಥಿನಿಯರಿಗೆ HPV ಲಸಿಕೆ ಹಾಗೂ ಮುಟ್ಟಿನ ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಡಾ. ಸುಮಂಗಲಾ ಅವರು HPV ಲಸಿಕೆಯ ಮಹತ್ವ ಮತ್ತು ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಿಕೆಯಲ್ಲಿ ಲಸಿಕೆಯ ಪಾತ್ರದ ಬಗ್ಗೆ ವಿಸ್ತೃತವಾಗಿ ಮಾಹಿತಿ ನೀಡಿದರು. ಡಾ. ತನುಜಾ ಅವರು ಮುಟ್ಟಿನ ಅವಧಿಯಲ್ಲಿ ಕಾಪಾಡಿಕೊಳ್ಳಬೇಕಾದ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದ ನಂತರ ಅನೇಕ ವಿದ್ಯಾರ್ಥಿನಿಯರು HPV ಲಸಿಕೆ ಪಡೆಯಲು ಆಸಕ್ತಿ ತೋರಿದ್ದಾರೆ. ಈ ಕುರಿತು ಮಾತನಾಡಿದ ಆಯೋಜಕರು, "ಒಬ್ಬ ವ್ಯಕ್ತಿಗೆ ಕ್ಯಾನ್ಸರ್ ಬಂದರೆ ಅವರು ಸಾಕಷ್ಟು ನರಳಬೇಕಾಗುತ್ತದೆ, ದುಬಾರಿ ಚಿಕಿತ್ಸೆ ಪಡೆಯಬೇಕಾಗುತ್ತದೆ, ಜೊತೆಗೆ ಕುಟುಂಬದವರು ಕೂಡ ತೊಂದರೆ ಅನುಭವಿಸುತ್ತಾರೆ. ಆದ್ದರಿಂದ 'Prevention is better than cure' ಎಂಬಂತೆ ಕ್ಯಾನ್ಸರ್ ಬರುವುದನ್ನು ತಡೆಗಟ್ಟುವುದು ನನ್ನ ಉದ್ದೇಶವಾಗಿದೆ. ಅದಕ್ಕಾಗಿ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇನೆ" ಎಂದು ತಿಳಿಸಿದ್ದಾರೆ.