ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಹಿರಿಯ ಕಂದಾಯ ಅಧಿಕಾರಿಯೊಬ್ಬರ (Indian Revenue Service) 22 ವರ್ಷದ ಮಗಳು ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿರುವ ಘಟನೆ ನಡೆದಿದೆ.
ಆಗ್ನೇಯ ದೆಹಲಿಯ ಪ್ರದೇಶದಲ್ಲಿರುವ ಅವರ ಮನೆಯಲ್ಲೇ ಈ ಭೀಕರ ಕೊಲೆ ನಡೆದಿದ್ದು, ಕೊಲೆಗೂ ಮುನ್ನ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ. ಹತ್ಯೆಗೆ ಮೊಬೈಲ್ ಫೋನ್ ಚಾರ್ಜರ್ ಕೇಬಲ್ ಬಳಸಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ.
ಕೊಲೆಯಾದ ಯುವತಿ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು ಎಂದು ವರದಿಯಾಗಿದೆ.
ಘಟನೆಯ ಸಮಯದಲ್ಲಿ ಮುಂಜಾನೆ ಯುವತಿ ಮನೆಯಲ್ಲೊಬ್ಬಳೇ ಇದ್ದಳು. ಆಕೆಯ ಪೋಷಕರು ಜಿಮ್‌ಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿರುವುದು ತಿಳಿದು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಒಂದೂವರೆ ತಿಂಗಳ ಹಿಂದೆ ಕೆಲಸದಿಂದ ತೆಗೆದುಹಾಕಲಾಗಿದ್ದ ಮನೆಗೆಲಸದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.