LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ವರಮಹಾಲಕ್ಷ್ಮಿ ವ್ರತ ಹೇಗೆ ಮಾಡಬೇಕು?

2024 ರಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಶ್ರಾವಣ ಶುಕ್ಲದ ಎರಡನೇ ಶುಕ್ರವಾರದಂದು, ಅಂದರೆ ಆಗಸ್ಟ್ 16 ರಂದು ಆಚರಿಸಲಾಗುವುದು. ಸರ್ವೇಸಾಮಾನ್ಯವಾಗಿ ಹಬ್ಬ, ಆಚರಣೆಗಳನ್ನು ವೈಯಕ್ತಿಕವಾಗಿ ಆಚರಿಸುವಾಗ ಅದು ವ್ರತವಾಗುತ್ತದೆ. ಒಟ್ಟಿಗೆ ಒಂದು ಕಡೆ ಸೇರಿ ಆಚರಿಸುವಾಗ ಅದು ಉತ್ಸವವಾಗುತ್ತದೆ.

ನಮ್ಮ ಅನೇಕ ವ್ರತಗಳು ಚಾತುರ್ಮಾಸದ ನಾಲ್ಕು ತಿಂಗಳಿನಲ್ಲಿ ಬರುತ್ತವೆ. ಅದರಲ್ಲಿಯೂ ಶ್ರಾವಣ ಮಾಸವು ಮಹತ್ತ್ವದ್ದಾಗಿದೆ. ಶ್ರಾವಣದಲ್ಲಿ ಬರುವಂತಹ ಶ್ರೀ ವರಮಹಾಲಕ್ಷ್ಮಿ ವ್ರತವು ಸುಮಂಗಲೆಯರಿಗೆ ಒಂದು ಮಹತ್ತ್ವದ ವ್ರತವಾಗಿದೆ. ಅಸುರರಿಂದ ರಕ್ಷಣೆಯಾಗಲು, ಸಕಲ ಸಂಪತ್ತು ಪ್ರಾಪ್ತವಾಗಲು ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಶಕ್ತಿಯ ಉಪಾಸನೆಯನ್ನು ಮಾಡುವುದು ಆವಶ್ಯಕವಾಗಿದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಅದರಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತವೂ ಒಂದು.

*ಶ್ರೀ ವರಮಹಾಲಕ್ಷ್ಮಿ ವ್ರತದ ಧಾರ್ಮಿಕ ಹಿನ್ನೆಲೆ*

ಕೈಲಾಸದಲ್ಲಿ ಶಿವ ಪಾರ್ವತಿಯ ನಡುವಿನ ಸಂವಾದ ?

ಪಾರ್ವತಿದೇವಿಯು ಶಿವನಲ್ಲಿ ಈ ರೀತಿ ಕೇಳುತ್ತಾಳೆ ? ‘ಲೋಕದಲ್ಲಿ ಯಾವ ವ್ರತದಿಂದ ಎಲ್ಲ ಕಷ್ಟಗಳು ಪರಿಹಾರವಾಗಲು ಸಾಧ್ಯವಿದೆಯೋ, ಯಾವ ವ್ರತದಿಂದ ಸರ್ವ ಸಂಪತ್ತುಗಳು ಪ್ರಾಪ್ತವಾಗಲು ಸಾಧ್ಯವಿದೆಯೋ, ಅಂತಹ ವ್ರತವೇನಾದರೂ ಇದ್ದರೆ, ಆ ವ್ರತದ ಬಗ್ಗೆ ತಿಳಿಸುವ ದಯೆ ಮಾಡಿ’ ಎಂದು. ಈ ಕೋರಿಕೆಯನ್ನು ಆಲಿಸಿದ ಶಂಕರನು ಪಾರ್ವತಿದೇವಿಗೆ ಮುಂದಿನ ಕಥೆಯನ್ನು ಹೇಳುತ್ತಾನೆ.

ಹಿಂದೊಮ್ಮೆ ಪುರಾಣಕಾಲದಲ್ಲಿ ಕುಂಡಿನಾಪುರ ಎಂಬ ಸಂಪದ್ಭರಿತವಾದ ಊರಿನಲ್ಲಿ ಚಾರುಮತಿ ಎಂಬ ಓರ್ವ ಬ್ರಾಹ್ಮಣ ಸ್ತ್ರೀಯು ಅವಳ ಪತಿಯೊಂದಿಗೆ ವಾಸಿಸುತ್ತಿದ್ದಳು. ಮನೆಯಲ್ಲಿ ಕಡು ಬಡತನವಿದ್ದರೂ ಚಾರುಮತಿಯು ಭಕ್ತಿಯಲ್ಲಿ ಶ್ರೀಮಂತಳಾಗಿದ್ದಳು. ಅವಳ ಅನನ್ಯ ಭಕ್ತಿಗೆ ಪ್ರಸನ್ನಳಾದ ಶ್ರೀ ವರಮಹಾಲಕ್ಷ್ಮಿ ದೇವಿಯು ಅವಳ ಕನಸಿನಲ್ಲಿ ದರ್ಶನವನ್ನು ನೀಡಿ ಮುಂದಿನ ವರವನ್ನಿತ್ತಳು. ‘ಶ್ರಾವಣ ಮಾಸದ ಹುಣ್ಣಿಮೆಯ ಹತ್ತಿರದ ಶುಕ್ರವಾರದಂದು (ಅಂದರೆ ೨ ನೇ ಶುಕ್ರವಾರದಂದು) ಯಾರು ಈ ವ್ರತವನ್ನು ಭಕ್ತಿ ಭಾವದಿಂದ ಆಚರಿಸಿ ಏನನ್ನೂ ಬೇಡಿದರೆ, ಅವರಿಗೆ ಅದು ಪ್ರಾಪ್ತವಾಗುತ್ತದೆ. ಆ ದಿನ ಸಂಜೆ ನಾನು ಭೂಲೋಕಕ್ಕೆ ಇಳಿದು ಬರುವೆನು. ಆ ಸಮಯದಲ್ಲಿ ಯಾರ ಮನೆಯ ಬಾಗಿಲಿನಲ್ಲಿ ದೀಪ ಬೆಳಗಿಸಿ ನನ್ನನ್ನು ಯಾರು ಭಕ್ತಿಯಿಂದ ಬರಮಾಡಿಕೊಳ್ಳುತ್ತಾರೆಯೋ ಅವರ ಮನೆಯಲ್ಲಿ ನಾನು ನೆಲೆಸಿ ಸಕಲ ಸಂಪತ್ತುಗಳನ್ನು ನೀಡುವೆನು’ ಎಂದು ಹೇಳಿ ದೇವಿ ವರಮಹಾಲಕ್ಷ್ಮಿಯು ಅದೃಶ್ಯಳಾದಳು.

ತನಗೆ ದೇವಿ ನೀಡಿದ ದರ್ಶನದ ಬಗ್ಗೆಯೂ, ವರದ ಬಗ್ಗೆಯೂ ಚಾರುಮತಿ ಬೆಳಗಾಗುತ್ತಲೇ ಊರಿನವರೆಲ್ಲರಿಗೂ ಹೇಳುತ್ತಾಳೆ. ಇವಳ ಮಾತನ್ನು ಕೇಳಿದ ಊರಿನವರು ‘ಚಾರುಮತಿಗೆ ಭ್ರಮೆಯಾಗಿದೆ, ಬುದ್ಧಿ ಭ್ರಷ್ಟವಾಗಿದೆ’ ಎಂದು ಹೇಳಿ ಹೀಯಾಳಿಸುತ್ತಾರೆ. ಆದರೆ ಅಂದು ಶ್ರಾವಣ ಮಾಸದ ಎರಡನೇ ಶುಕ್ರವಾರವಾಗಿತ್ತು. ಚಾರುಮತಿಯು ದೇವಿಯ ಆಜ್ಞೆಯಂತೆ ಮನೆಯನ್ನು ಶುಚಿಗೊಳಿಸಿ, ದೀಪ ಬೆಳಗಿಸಿ, ಮನೆಯನ್ನು ಯಥಾ ಶಕ್ತಿ ದೀಪಗಳಿಂದ ಅಲಂಕರಿಸಿ ಶ್ರೀ ದೇವಿಯ ಆಗಮನಕ್ಕೆ ಭಕ್ತಿ ಭಾವದಿಂದ ಕಾದುಕುಳಿತಳು. ಶ್ರೀ ದೇವಿಯು ಭೂಲೋಕಕ್ಕೆ ಇಳಿದಾಗ, ಇತರರ ಮನೆಯಲ್ಲಿ ಅವಳನ್ನು ಬರಮಾಡಿಕೊಳ್ಳಲು ದೀಪಗಳು ಇರಲಿಲ್ಲ. ಆದುದರಿಂದ ದೀಪಗಳಿಂದ ಝಗಝಗಿಸುವ ಭಕ್ತೆ ಚಾರುಮತಿಯ ಮನೆಗೆ ಬಂದು ದೇವಿಯು ಶಾಶ್ವತವಾಗಿ ಅಲ್ಲೇ ನೆಲೆಸುತ್ತಾಳೆ. ಶ್ರೀ ದೇವಿಯ ಆಗಮನದಿಂದ ಚಾರುಮತಿಯ ಮನೆಯ ಬಡತನವೆಲ್ಲ ದೂರವಾಗಿ ಅಲ್ಲಿ ಸುಖ-ಶಾಂತಿ-ನೆಮ್ಮದಿ ನೆಲೆಸುತ್ತವೆ, ಮನೆತನವು ಸಂಪದ್ಭರಿತವಾಗುತ್ತದೆ.

ಚಾರುಮತಿಯ ಮೇಲಾದ ಶ್ರೀ ದೇವಿಯ ಕೃಪೆಯನ್ನು ಕಂಡ ಊರಿನ ಇತರ ಸುಮಂಗಲೆಯರೂ ಕೂಡ ವರಮಹಾಲಕ್ಷ್ಮಿ ವ್ರತವನ್ನು ಆಚರಿಸಿ ಇಷ್ಟಾರ್ಥ ಸಿದ್ಧಿಗಳನ್ನು ಮಾಡಿಕೊಳ್ಳುತ್ತಾರೆ.ಇಂದಿಗೂ ಕೂಡ ಯಾರು ಶ್ರದ್ಧೆ-ಭಕ್ತಿಯಿಂದ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆಯೋ ಅವರ ಮೇಲೆ ಶ್ರೀ ದೇವಿಯ ಕೃಪೆಯು ಖಂಡಿತವಾಗಿಯೂ ಇರುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರು