E-PAPER
17 Nov 2026, 05:27:08 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹೃದಯಾಘಾತದಿಂದ ಕಣ್ಮರೆಯಾದ ರಂಗಭೂಮಿಯ ಕಲಾವಿದ – ರಾಜು ತಾಳಿಕೋಟಿ ನಿಧನ

ಕಲಿಯುಗದ ಕುಡುಕ ಎಂಬ ನಾಟಕದ ಮೂಲಕವೇ ಜನಪ್ರಿಯತೆ ಗಳಿಸಿದ್ದ ರಾಜು ತಾಳಿಕೋಟಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ 2024 ರ ಆಗಸ್ಟ್ 12 ರಂದು ರಾಜ್ಯ ಸರ್ಕಾರ ತಾಳಿಕೋಟಿ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು.

ರಂಗಭೂಮಿ ಕಲಾವಿದರಾಗಿದ್ದ ತಾಳಿಕೋಟಿ ಸಾಕಷ್ಟು ನಾಟಕ ಹಾಗೂ ಸಿನಿಮಾಗಳಲ್ಲಿ ಪಾತ್ರ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದರು. ರಂಗಭೂಮಿಯಲ್ಲಿ ಅವರಿಗಿದ್ದ ಅಪಾರ ಅನುಭವದ ಹಿನ್ನೆಲೆಯಲ್ಲೇ ರಾಜ್ಯ ಸರ್ಕಾರ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು.

14 ತಿಂಗಳ ಕಾಲ ನಿರ್ದೇಶಕರಾಗಿದ್ದ ಅವರು ರಂಗಾಯಣದಲ್ಲಿ ಅನೇಕ ರಂಗ ಚಟುವಟಿಕೆಗಳನ್ನು ಮಾಡಿದ್ದರು. ಹೃದಯಾಘಾತವಾದ ಹಿನ್ನೆಲೆ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಸೋಮವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು. ಅವರ ಜೀವನದ ಬಹುಪಾಲು ಸಮಯವನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ರಂಜಿಸುವುದರಲ್ಲಿಯೇ ಕಳೆದಿದ್ದರು.

ರಂಗಭೂಮಿಯಲ್ಲಿ ಅಪಾರ ಅನುಭವ ಪಡೆದ ನಂತರ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಪ್ರವೇಶಿಸಿದರು. ಪ್ರಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.

ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದು, ಉತ್ತರ ಕರ್ನಾಟಕದ ಕಲಾರಂಗಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಅವರ ಅಂತಿಮ ವಿಧಿವಿಧಾನಗಳು ತಾಳಿಕೋಟಿ ನಗರದಲ್ಲಿ ನಡೆಯಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ