LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉತ್ತರಾಖಂಡದಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆ

ಅಲ್ಮೋರಾ : ಶಾಲೆಯೊಂದರ ಬಳಿಯ ಪೊದೆಯಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾದ ಘಟನೆ ಉತ್ತರಾಖಂಡದ ಹಳ್ಳಿಯೊಂದರಲ್ಲಿ ನಡೆದಿದೆ.

ಅಲ್ಮೋರಾ ಜಿಲ್ಲೆಯ ದಬಾರಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಬಳಿಯ ಪೊದೆಯೊಂದರಲ್ಲಿ 20 ಕೆಜಿಗಿಂತ ಹೆಚ್ಚು ತೂಕದ 161 ಜೆಲಾಟಿನ್ ಕಡ್ಡಿಗಳು ಪತ್ತೆಯಾಗಿದೆ. ಪೊಲೀಸರು ಸಮೀಪದ ಪ್ರದೇಶಗಳಲ್ಲಿ ಶೋಧ ನಡೆಸಿದ್ದಾರೆ.

ಪೊದೆಗಳಲ್ಲಿ ಅನುಮಾನಾಸ್ಪದ ಪ್ಯಾಕೆಟ್ ಗಮನಿಸಿದ ಪ್ರಾಂಶುಪಾಲ ಸುಭಾಷ್ ಸಿಂಗ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಎರಡು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿವೆ.

ಉಧಮ್ ಸಿಂಗ್ ನಗರ ಮತ್ತು ನೈನಿತಾಲ್ ಜಿಲ್ಲೆಗಳಿಂದ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳವನ್ನು ಕರೆಸಿ ಸಂಪೂರ್ಣ ಶೋಧ ನಡೆಸಲಾಗಿದೆ. ಈ ವೇಳೆ ಪೊದೆಗಳಲ್ಲಿ ಕೆಲವು ಜಿಲೆಟನ್ ಕಡ್ಡಿಗಳ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಸುಮಾರು 20 ಅಡಿ ದೂರದಲ್ಲಿ ಇನ್ನೂ ಕೆಲವು ಪ್ಯಾಕೆಟ್‌ಗಳು ಕಂಡುಬಂದಿದ್ದು, ಬಾಂಬ್ ನಿಷ್ಕ್ರಿಯ ದಳ ಅವುಗಳನ್ನು ವಶಕ್ಕೆ ಪಡೆದುಕೊಂಡಿದೆ.

"ದಾಬ್ರಾ ಗ್ರಾಮದ ಶಾಲೆಯ ಬಳಿಯ ಪೊದೆಗಳಿಂದ 161 ಜಿಲಾಟಿನ್ ಕಡ್ಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲಾಟಿನ್ ಕಡ್ಡಿಗಳು ನಿರ್ಮಾಣ ಮತ್ತು ಗಣಿಗಾರಿಕೆ ಉದ್ದೇಶಗಳಿಗಾಗಿ ಬಂಡೆಗಳನ್ನು ಸ್ಫೋಟಿಸಲು ಸಾಮಾನ್ಯವಾಗಿ ಬಳಸುವ ಸ್ಫೋಟಕ ವಸ್ತುಗಳಾಗಿವೆ. ಸ್ಪೋಟಕ ವಸ್ತುಗಳು ಎಲ್ಲಿಂದ ಬಂದಿವೆ ಎಂಬುದರ ಕುರಿತು ತನಿಖೆ ಮಾಡಲಾಗುತ್ತಿದೆ" ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ದೇವೇಂದ್ರ ಪಿಂಚ ತಿಳಿಸಿದ್ದಾರೆ.

ಅಪರಿಚಿತ ಜನರ ವಿರುದ್ಧ ಸ್ಫೋಟಕ ವಸ್ತುಗಳ ಕಾಯ್ದೆ 1908 ರ ಸೆಕ್ಷನ್ 4 (ಎ) ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 288 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026