LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಂದಿನ ಐದು ವರ್ಷವೂ ನಾನೇ ಸಿಎಂ : ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷವೂ ನಾನೇ ಮುಖ್ಯಮಂತ್ರಿ  ಆಗಿರುತ್ತೇನೆ. ಅದರ ಮುಂದಿನ ಸರಕಾರದ ಆಡಳಿತ ಅವಧಿಗೂ ನಾನೇ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸದನದಲ್ಲೇ ಹೇಳಿದ್ದಾರೆ. ವಿಧಾನ ಸಭೆಯಲ್ಲಿ  ವಿಪಕ್ಷ ನಾಯಕರ ಮಾತಿನ ಸಂದರ್ಭದಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಸಿಎಂ ಪದವಿಯಲ್ಲಿ ಬದಲಾವಣೆಯ ಕುರಿತು ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆಯಲು ಈ ಸಂದರ್ಭವನ್ನು ಅವರು ಉಪಯೋಗಿಸಿಕೊಡರು.


ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ಕಾಂಗ್ರೆಸ್ ಸದಸ್ಯರ ನೇಮಕಕ್ಕೆ ಆಕ್ಷೇಪಿಸಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡುತ್ತಿದ್ದರು. ಆಗ ಸಿದ್ದರಾಮಯ್ಯ ಅವರು “ಹೇ… ಆಶೋಕ ಬರೆದುಕೊ, ನಾನೇ ಪರ್ಮನೆಂಟು” ಅಂತ ಹೇಳಿದ್ದರು. “ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಅನೇಕ ಕಾಂಗ್ರೆಸ್ ನಾಯಕರೇ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಐದು ವರ್ಷ ಪೂರೈಸಲಿ ಎಂದು ನಾವು ಬಯಸುತ್ತೇವೆ” ಎಂದು ಆರ್‌. ಅಶೋಕ್‌ ಹೇಳಿದರು.


ಇದಕ್ಕೆ ಮರು ಉತ್ತರಿಸಿದ ಸಿದ್ದರಾಮಯ್ಯ ಅವರು, “ಹೌದು, ಈ ಐದು ವರ್ಷ ಅಲ್ಲ, ಮತ್ತೆ ಮುಂದಿನ ಐದು ವರ್ಷವೂ ನಾವೇ ಅಧಿಕಾರಕ್ಕೆ ಬರುತ್ತೇವೆ” ಎಂದು ಹೇಳಿದರು. ಆಗಲೂ ನೀವೇ ಮುಖ್ಯಮಂತ್ರಿ ಆಗಿರುತ್ತೀರಾ ಎಂಬ ಬಿಜೆಪಿ ಸದಸ್ಯರ ಪ್ರಶ್ನೆಗೆ, “ಹೌದು ನಾನೇ ಇರುತ್ತೇನೆ” ಎಂದು ಸಿದ್ದರಾಮಯ್ಯ ಉತ್ತರಿಸಿದರು.


ಸಿದ್ದರಾಮಯ್ಯ ಅವರ ಈ ಮಾತುಗಳು ಬಿಜೆಪಿ ಶಾಸಕರ ಬಾಯಿ ಮುಚ್ಚಿಸಿತು. ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಪದವಿ ಆಕಾಂಕ್ಷಿಗಳ ಬಣದಲ್ಲಿಯೂ ಈ ಮಾತು ಕಳವಳ ಮೂಡಿಸಿರುವ ಸಾಧ್ಯತೆ ಇದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನ ವಚನ: - --ಸಿದ್ಧರಾಮೇಶ್ವರ   ಅವರ ವಚನ..!ಟಾಕ್ಸಿಕ್ ಸಿನಿಮಾದ ಫ್ಲೆಕ್ಸ್ ಅಳವಡಿಕೆ ನಟ ಯಶ್ ವಿರುದ್ಧ FIR.!ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ 26ನೇ ವರ್ಷದ ದೀಪೋತ್ಸವದಾವಣಗೆರೆ : ಮೆಕ್ಕೆಜೋಳ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಸುಬ್ರಹ್ಮಣ್ಯ ಸ್ವಾಮಿಯ ವೀರಗಾಥೆ! ದುಷ್ಟ ತಾರಕಾಸುರನನ್ನು ವೀರ ಶೂರ ಕಾರ್ತಿಕೇಯನು ಸಂಹರಿಸಿದ ಕಥೆ!ಇಂದಿನ ವಚನ: - -ಅಕ್ಕಮಹಾದೇವಿ  ಅವರ ವಚನ..!ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಹೆಣ್ಣಿನ ವೇಷ ಧರಿಸಿ ಓಡಾಡುತ್ತಿದ್ದ ಆರೋಪಿ ಬಂಧನ'ಬೀದಿ ನಾಯಿಗಳು ಕಚ್ಚಿದರೆ ಸರ್ಕಾರವೇ ಪರಿಹಾರ ನೀಡಬೇಕು'- ಸುಪ್ರೀಂ ಕೋರ್ಟ್‌ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಆರು ಮಂದಿ ಉಪನ್ಯಾಸಕರು ಕರ್ತವ್ಯದಿಂದ ವಜಾಪದ ಬಳಕೆ ವಿವಾದ - ಬಿಗ್‌ಬಾಸ್‌ ಶೋ, ನಟ ಸುದೀಪ್ ವಿರುದ್ಧ ದೂರು ದಾಖಲು