ಬೆಂಗಳೂರು: ನನಗೆ ಎರಡು ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಸಿಕ್ಕಿತ್ತು ಎಂದು ಸಚಿವ M. B. Patil ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಹುದ್ದೆ ಎರಡು ಬಾರಿ ನನ್ನ ಬಳಿ ಬಂದಿತ್ತು. ಆದರೆ ಕೆಲವು ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ. ಆಗ ನಾನು ನೀರಾವರಿ ಸಚಿವನಾಗಿದ್ದೆ. ಕಾಂಗ್ರೆಸ್ ಪಕ್ಷ ನನಗೆ ಸಾಕಷ್ಟು ಅವಕಾಶಗಳನ್ನು ನೀಡಿದೆ. ಈ ಹುದ್ದೆ ಬೇಕೆಂದರೆ ಮಾಧ್ಯಮಗಳ ಮುಂದೆ ಹೇಳುವುದಕ್ಕಿಂತ ಸೂಕ್ತ ವೇದಿಕೆಯಲ್ಲಿ ಹೇಳುತ್ತೇನೆ. ಹೈಕಮಾಂಡ್ ಮುಂದೆ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇನೆ. ಪಕ್ಷದ ಹಿರಿಯರು ಚರ್ಚೆ ಮಾಡುವಾಗ ನನ್ನ ಮನಸ್ಸಿನ ಮಾತನ್ನು ಹಂಚಿಕೊಳ್ಳುತ್ತೇನೆ ಎಂದರು.
ಇನ್ನೂ ಕಾಂಗ್ರೆಸ್‌ನಲ್ಲಿ ನನ್ನ ನೇತೃತ್ವದಲ್ಲಿ ಶಾಸಕರು ಗೆದ್ದಿದ್ದಾರೆ ಎಂಬ D. K. Shivakumar ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರು ಪ್ರಮುಖರು, ಸರ್ಕಾರದಲ್ಲಿ ಸಿಎಂ ಮುಖ್ಯಸ್ಥರು ಎಂದು ಹೇಳಿದರು. ಈ ಬಗ್ಗೆ ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ. Siddaramaiah, ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದ ಪರಿಣಾಮ ಜನರ ಆಶೀರ್ವಾದ ದೊರೆತಿದೆ ಎಂದು ಹೇಳಿದರು.
ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ Manmohan Singh ಪ್ರಧಾನಿಯಾಗಿದ್ದಾಗ ಪೆಟ್ರೋಲ್ ದರ ಸುಮಾರು 65 ರೂ. ಇತ್ತು. ಆಗ ಟೀಕೆ ಮಾಡುತ್ತಿದ್ದವರು ಈಗ ಮೌನವಾಗಿದ್ದಾರೆ. ಇಂದಿಗೆ ಪೆಟ್ರೋಲ್ 105 ರೂ., ಡೀಸೆಲ್ 98 ರೂ., ಅಡುಗೆ ಎಣ್ಣೆ 150 ರೂ. ಆಗಿರುವುದನ್ನು ಉಲ್ಲೇಖಿಸಿ ಬಿಜೆಪಿಯನ್ನು ಟೀಕಿಸಿದರು.