Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ನಿತೀಶ ಕುಮಾರಗಾಗಿ 9 ಕೊಲೆ ಮಾಡಿಸಿದ್ದೆ: ಜೆಡಿಯು ಶಾಸಕ ಅನಂತ ಸಿಂಗ್

ಪಾಟ್ನಾ, ಅ. 17: ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಯು ಮುಖ್ಯಸ್ಥ ನಿತೀಶ ಕುಮಾರ ಅವರ ಆರಂಭಿಕ ರಾಜಕೀಯ ಜೀವನದಲ್ಲಿ ಅವರಿಗೆ ನೆರವಾಗಲು 9 ಜನರ ಕೊಲೆ ಮಾಡಿಸಿದ್ದಾಗಿ ಮೊಕಾಮಾ ಕ್ಷೇತ್ರದ ಜೆಡಿಯು ಶಾಸಕ ಅನಂತ ಸಿಂಗ್ ನೀಡಿರುವ ಹೇಳಿಕೆ ಬಿಹಾರದ ರಾಜಕೀಯ ವಲಯದಲ್ಲಿ ವಿವಾದ ಸೃಷ್ಟಿಸಿದೆ.

ಪಾಟ್ನಾ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷದ ಅಭ್ಯರ್ಥಿ ಅನುಜ ಸಿಂಗ್ ಪರ ಶುಕ್ರವಾರ ಪ್ರಚಾರ ನಡೆಸಿದ ಅನಂತ್ ಸಿಂಗ್, ನಿತೀಶ್ ಕುಮಾರ ಅವರ ರಾಜಕೀಯ ಬೆಳವಣಿಗೆಗೆ ತಾವು ನೀಡಿದ ಕೊಡುಗೆಗಳನ್ನು ಪ್ರಸ್ತಾಪಿಸುವಾಗ ಈ ಹೇಳಿಕೆ ನೀಡಿದ್ದಾರೆ.

‘ನಿತೀಶ್ ಕುಮಾರ ಅವರಿಗಾಗಿ ನಾನು ಮಾಡಿದಷ್ಟು ತ್ಯಾಗವನ್ನು ಪಕ್ಷದ ಬೇರೆ ಯಾರೂ ಮಾಡಿಲ್ಲ. ಆಗ ಅವರು ರಾಜಕೀಯದಲ್ಲಿ ಏನೂ ಆಗಿರಲಿಲ್ಲ. ಸುಮ್ಮನೆ ಅಲೆದಾಡುತ್ತಿದ್ದರು. ಆ ಸಂದರ್ಭದಲ್ಲಿ ಅವರೊಂದಿಗೆ ಇದ್ದುಕೊಂಡು 9 ಜನರ ಕೊಲೆ ಮಾಡಿಸಿದ್ದೆ’ ಎಂದು ಅನಂತ್ ಸಿಂಗ್ ಹೇಳಿಕೊಂಡಿದ್ದಾರೆ.

ಆದರೆ, ನಿತೀಶ್ ಕುಮಾರ ಅವರ ಮೇಲಿನ ತಮ್ಮ ನಿಷ್ಠೆ ಬದಲಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ‘ನಾನು ನಿತೀಶ್ ಕುಮಾರ ಅವರ ಕಟ್ಟಾ ಬೆಂಬಲಿಗ. ಅವರ ನಾಯಕತ್ವವನ್ನು ಎಂದಿಗೂ ಪ್ರಶ್ನಿಸಿಲ್ಲ. ಈ ಚುನಾವಣೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ. ಆದ್ದರಿಂದ ಅನುಜ್ ಸಿಂಗ್ ಅವರನ್ನು ಬೆಂಬಲಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 23ರಂದು ನಡೆಯಲಿರುವ ಪಾಟ್ನಾ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಯು ಅಭ್ಯರ್ಥಿ ನೀರಜ್ ಕುಮಾರ ವಿರುದ್ಧ ಅನಂತ್ ಸಿಂಗ್ ಪ್ರಚಾರ ನಡೆಸುತ್ತಿರುವುದು ಪಕ್ಷದೊಳಗಿನ ಭಿನ್ನಮತವನ್ನು ಬಹಿರಂಗಪಡಿಸಿದೆ.

ಮೊಕಾಮಾ ವಿಧಾನಸಭಾ ಕ್ಷೇತ್ರದ ಹಿಂದಿನ ಚುನಾವಣೆಯಲ್ಲಿ ನೀರಜ್ ಕುಮಾರ ತಮ್ಮ ವಿರುದ್ಧ ಕೆಲಸ ಮಾಡಿದ್ದರು. ಹೀಗಾಗಿ ಅವರನ್ನು ಸೋಲಿಸುವುದಾಗಿ ಅನಂತ್ ಸಿಂಗ್ ಬಹಿರಂಗವಾಗಿ ಸವಾಲು ಹಾಕಿದ್ದಾರೆ.

‘ಛೋಟೆ ಸರ್ಕಾರ್’ ಎಂದೇ ಗುರುತಿಸಿಕೊಂಡಿರುವ ಅನಂತ್ ಸಿಂಗ್, ಪಾಟ್ನಾ ಜಿಲ್ಲೆಯ ಮೊಕಾಮಾ ಪ್ರದೇಶದಲ್ಲಿ ಪ್ರಭಾವ ಹೊಂದಿದ್ದಾರೆ. ಇಬ್ಬರು ನಾಯಕರ ನಡುವಿನ ಭಿನ್ನಾಭಿಪ್ರಾಯ ಶಮನಗೊಳಿಸಲು ಜೆಡಿಯು ಹಿರಿಯ ನಾಯಕರು ನಡೆಸಿದ ಪ್ರಯತ್ನಗಳು ವಿಫಲವಾಗಿವೆ. ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ (ಲಾಲನ್ ಸಿಂಗ್) ಅವರ ಮನವೊಲಿಕೆಯೂ ಫಲ ನೀಡಿಲ್ಲ.

ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪ್ರಚಾರ ನಡೆಸುತ್ತಿರುವ ಅನಂತ್ ಸಿಂಗ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಉಮೇಶ್ ಸಿಂಗ್ ಕುಶ್ವಾಹಾ ಎಚ್ಚರಿಸಿದ್ದಾರೆ. ಆದರೆ, ತಮ್ಮ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದು ಅನಂತ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಸಾಮ್ರಾಟ್ ಚೌಧರಿ ವಿರುದ್ಧ ಪ್ರಶಾಂತ ಕಿಶೋರ ವಾಗ್ದಾಳಿ

ಇದೇ ವೇಳೆ ಜನ್ ಸುರಾಜ ಪಕ್ಷದ ಸಂಸ್ಥಾಪಕ ಪ್ರಶಾಂತ ಕಿಶೋರ್, ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ನಿತೀಶ್ ಕುಮಾರ ಅವರ ಹೆಸರಿನಲ್ಲಿ ಮತಗಳನ್ನು ಪಡೆದು ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿದ್ದಾರೆ. ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯೊಬ್ಬರು ಸರ್ಕಾರವನ್ನು ಹೇಗೆ ನಡೆಸಲು ಸಾಧ್ಯ?’ ಎಂದು ಪ್ರಶ್ನಿಸಿದ್ದಾರೆ.

ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಮುಂದುವರಿಯುವುದನ್ನು ವಿರೋಧಿಸಿರುವ ಪ್ರಶಾಂತ್ ಕಿಶೋರ್, ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಸೋಲಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ