Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಸವಣ್ಣನವರ ರೀತಿ ನಾನೂ ಮೌಢ್ಯ ನಂಬುವುದಿಲ್ಲ

 

ಹಂಪಿ :
ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50" ನ್ನು ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371 ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3000 ಕೋಟಿ ರೂ ಹೆಚ್ಚುವರಿ ಅನುದಾನ ನೀಡಿದ್ದೇವೆ ಎಂದರು.

 

ನನಗೆ ಮೌಢ್ಯದಲ್ಲಿ ನಂಬಿಕೆ ಇಲ್ಲ. ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ ಎಂದು ಸ್ಪಷ್ಟಪಡಿಸಿದರು.

ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50 ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್ ನಲ್ಲೇ "ಕನ್ನಡ ಸಂಭ್ರಮ-50" ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರಣೆ ನೀಡಿದ್ದೆ ಎಂದು ಸ್ಮರಿಸಿದರು.

ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ ಎಂದು ಕರೆ ನೀಡಿ ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಿ ಎಂದು ಕರೆ ನೀಡಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಗೌರವ ಉಪಸ್ಥಿತಿ ವಹಿಸಿದ್ದರು.

ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ.ಶ್ರೀನಿವಾಸ, ಜಿ.ಎನ್.ಗಣೇಶ, ಲತಾ, ಮಂಜುನಾಥ, ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

*ಮುಖ್ಯಮಂತ್ರಿಗಳ ಭಾಷಣದ ಇತರೆ ಹೈಲೈಟ್ಸ್*

* ದೇವರಾಜ ಅರಸರು ಮೈಸೂರು ರಾಜ್ಯ ಹೆಸರಿಗೆ ಬದಲಾಗಿ ಕರ್ನಾಟಕ ಎಂದು ನಾಮಕರಣ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ