LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿಮ್ಮೆಲ್ಲರ ಋಣ ತೀರಿಸಲು ಬಂದಿದ್ದೇನೆ.! : ಶಾಸಕ ಡಾ.ಚಂದ್ರಪ್ಪ

 

ಹೊಳಲ್ಕೆರೆ : ಚುನಾವಣೆಗೆ ಇನ್ನು ಮೂರು ವರ್ಷಗಳ ಸಮಯವಿದೆ. ನಾನು ಮತ ಕೇಳಲು ಬಂದಿಲ್ಲ. ನಿಮ್ಮೆಲ್ಲರ ಋಣ ತೀರಿಸಿ ನೀವುಗಳು ನನಗೆ ಮತ ನೀಡಿ ಗೆಲ್ಲಿಸಿದ್ದಕ್ಕೆ ಬೆಲೆ ಕೊಡಲು ಬಂದಿದ್ದೇನೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.

ತಾಲ್ಲೂಕಿನ ಕಲ್ಲವ್ವನಾಗತಿಹಳ್ಳಿ ಗ್ರಾಮದಲ್ಲಿ 3.50 ಕೋಟಿ ರೂ.ವೆಚ್ಚೆದಲ್ಲಿ ಎರಡು ನೂತನ ಚೆಕ್ಡ್ಯಾಂ ಹಾಗೂ ಸಿ.ಸಿ.ರಸ್ತೆ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಹದಿನೈದು ವರ್ಷದ ಕೆಳೆಗೆ ಡಾಂಬರ್ ರಸ್ತೆ ಮಾಡಿಸಿದ್ದೆ. ಇದುವರೆವಿಗೂ ಒಂದು ಕಲ್ಲು ಕೂಡ ಕಿತ್ತಿಲ್ಲ. ಅಷ್ಟು ಗಟ್ಟಿಮುಟ್ಟಾಗಿದೆ. ಚೆಕ್ಡ್ಯಾಂನಲ್ಲಿ ನೀರು ತುಂಬಿದರೆ ಸುತ್ತಮುತ್ತಲಿನ ಬೋರ್ವೆಲ್ಗಳಲ್ಲಿ ನೀರು ಚಿಮ್ಮುವುದರಿಂದ ರೈತರಿಗೆ ಅನುಕೂಲವಾಗುತ್ತದೆ. ಜಗಳೂರು ತಾಲ್ಲೂಕಿನಿಂದ ಹಿಡಿದು ತರಿಕೆರೆವರೆಗೂ ನನ್ನ ಕ್ಷೇತ್ರ ವ್ಯಾಪಿಸಿದೆ. 493 ಹಳ್ಳಿಗಳಲ್ಲಿ ಯಾರು ಏನೆ ಕೇಳಲಿ ಬಿಡಲಿ ಎಲ್ಲಿ ಯಾವ ಕೆಲಸ ಮಾಡಿದರೆ ಜನರಿಗೆ ಅನುಕೂಲವಾಗುತ್ತದೆಂಬ ಆಲೋಚನೆಯಿಟ್ಟುಕೊಂಡು ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆಂದು ಹೇಳಿದರು.

ತಾಲ್ಲೂಕಿನಾದ್ಯಂತ ಎಲ್ಲೆಡೆ ಗುಣಮಟ್ಟದ ಸಿ.ಸಿ.ರಸ್ತೆ, ಕೆರೆ ಕಟ್ಟೆಗಳಿಗೆ ನೀರು ತುಂಬಿಸುವುದು, ಚೆಕ್ಡ್ಯಾಂ ನಿರ್ಮಾಣ, ಬ್ರಿಟೀಷರ ಕಾಲದ ಶಾಲೆಗಳನ್ನು ಕೆಡವಿ ಅತ್ಯುತ್ತಮ ಕಟ್ಟಡಗಳನ್ನು ಕಟ್ಟಿಸಿದ್ದೇನೆ. ಪ್ರೌಢಶಾಲೆ, ಪಿ.ಯು. ಡಿಗ್ರಿ ಕಾಲೇಜು, ಐಟಿಐ. ಪಾಲಿಟೆಕ್ನಿಕ್, ವಸತಿ ಶಾಲೆಗಳ ನಿರ್ಮಾಣವಾಗಿದೆ. ಬಡವರಿಗೆ ಸುಲಭವಾಗಿ ಚಿಕಿತ್ಸೆ ಸಿಗಲಿ ಎನ್ನುವ ಉದ್ದೇಶದಿಂದ ಹೈಟೆಕ್ ಆಸ್ಪತ್ರೆಗಳನ್ನು ಕಟ್ಟಿಸಿದ್ದೇನೆ. ತಾಲ್ಲೂಕಿನಾದ್ಯಂತ ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತರುವುದಕ್ಕಾಗಿ 367 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. ರೈತರ ತೋಟಗಳು ಒಣಗಬಾರದೆಂದು ಹದಿನೇಳು ಕಡೆ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸಿದ್ದೇನೆ. ಇಷ್ಟು ಸಾಲದೆಂಬಂತೆ ಚಿಕ್ಕಜಾಜೂರಿನ ಕೋಟೆಹಾಳ್ ಬಳಿ ಹದಿಮೂರುವರೆ ಎಕರೆ ಜಾಗದಲ್ಲಿ ಐದುನೂರು ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗಲಿದೆ. ಜೋಗ್ಫಾಲ್ಸ್ನಿಂದ ನೇರವಾಗಿ ಇಲ್ಲಿಗೆ ವಿದ್ಯುತ್ ಪೂರೈಕೆಯಾಗಲಿದ್ದು, ಇದರಿಂದ ರೈತರಿಗೆ ಇನ್ನು ನೂರು ವರ್ಷಗಳ ಕಾಲ ಕರೆಂಟ್ನ ಅಭಾವವಿರುವುದಿಲ್ಲ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತ ಮಹಾದೇವಪ್ಪ, ಸದಸ್ಯರುಗಳಾದ ದೇವರಾಜ್, ಪರಮೇಶ್ವರ್ನಾಯ್ಕ, ಇ.ಸಿ.ಓ. ಬಸವರಾಜಪ್ಪ, ಎಸ್.ಡಿ.ಎಂ.ಸಿ. ಅಧ್ಯಕ್ಷ ಕೆ.ರಾಜು

ರುದ್ರೆಗೌಡ್ರು, ಸಿದ್ದಪ್ಪ, ಕುಮಾರಸ್ವಾಮಿ, ಮಹೇಶ್, ಶಿವಮೂರ್ತಿ, ಸತೀಶ್, ರಾಜು, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ಗಳಾದ ಆನಂದಪ್ಪ, ನವೀನ್ ಹಾಗೂ ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026