LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾನು 2 ದಿನದಲ್ಲಿ ರಾಜೀನಾಮೆ ಕೊಟ್ಟರು ಯಾವುದೇ ಆಶ್ಚರ್ಯವಿಲ್ಲ : ರಾಜು ಕಾಗೆ

ಬೆಳಗಾವಿ : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದು, ರಾಜೀನಾಮೆ ನೀಡುವ ಬೆದರಿಕೆ ಹಾಕುತ್ತಿದ್ದಾರೆ. ಇದೀಗ ಕಾಂಗ್ರೆಸ್ ಶಾಸಕರಾದಂತಹ ರಾಜು ಕಾಗೆ ರಾಜ್ಯದ ಇಂತಹ ಆಡಳಿತ ವ್ಯವಸ್ತೆಯಿಂದ ನನಗೆ ತುಂಬಾ ನೋವಾಗಿದೆ.

ಎರಡು ದಿನದಲ್ಲಿ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಯಾವುದೇ ಆಶ್ಚರ್ಯವಿಲ್ಲ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯ ಬಗ್ಗೆ ಅಸಮಧಾನ ಹೊರ ಹಾಕಿದ ಅವರು, ರಾಜಿನಾಮೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಸ್ವಪಕ್ಷದ ಶಾಸಕರಿಂದಲೇ ಇದೀಗ ಅಸಮಾಧಾನ ಹೊರ ಬೀಳುತ್ತಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ.

ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ ಎಂದು ಬೆಳಗಾವಿಯಲ್ಲಿ ಶಾಸಕ ರಾಜು ಕಾಗೆ ಅಸಮಾಧಾನ ಹೊರಹಾಕಿದ್ದಾರೆ.

ಶಾಸಕ ಬಿ.ಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಬಿ ಆರ್ ಪಾಟೀಲ್ ಹೇಳಿದ್ದು ಸುಳ್ಳಲ್ಲ ಅವರು ನಿಜಾನೆ ಹೇಳಿದ್ದಾರೆ ನನ್ನ ಕ್ಷೇತ್ರಕ್ಕೆ 25 ಕೋಟಿ ಅನುದಾನ ಕೊಟ್ಟರು ಇನ್ನೂ ಆರ್ಡರ್ ಬಂದಿಲ್ಲ. ರಾಜ್ಯದ ಎಲ್ಲಾ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ ನನಗೆ ಇದರಿಂದ ತುಂಬಾ ಮನಸ್ಸಿಗೆ ನೋವಾಗಿದೆ. ನಾನು ಎರಡು ದಿನದಲ್ಲಿ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ ಎಂದು ಹೇಳಿಕೆ ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026