LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ

ಬೆಂಗಳೂರು : ಇದೇ 31ರಂದು ನಿವೃತ್ತರಾಗಲಿರುವ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರನ್ನು ಫೆ. 1ರಿಂದ ಅನ್ವಯವಾಗುವಂತೆ ಸಿಎಂ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಪ್ರಸ್ತುತ ಅತೀಕ್ ಅವರು ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇನ್ನು ಅತೀಕ್ ಅವರ ನಿವೃತ್ತಿಯಿಂದ ತೆರವಾಗಲಿರುವ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶವನ್ನು ಹೊರಡಿಸಿದೆ.

ವಿತ್ತ ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸುವ ಸಮಯದಲ್ಲಿ ಎಲ್. ಕೆ. ಅತೀಕ್ ಅವರು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಮುಂದುವರೆಸಲಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST