LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐಎಎಸ್ ಅಧಿಕಾರಿ ಶೋಭಿಕಾ ಪಾಠಕ್ ಯಶೋಗಾಥೆ

ತೆಲಂಗಾಣ : ಕಠಿಣ ಪರಿಶ್ರಮ ಮತ್ತು ಛಲವಿದ್ದರೆ ಎಂತಹ ಗುರಿಯನ್ನಾದರೂ ತಲುಪಬಹುದು ಎಂಬುದಕ್ಕೆ ಐಎಎಸ್ ಅಧಿಕಾರಿ ಶೋಭಿಕಾ ಪಾಠಕ್ ಅವರ ಯಶೋಗಾಥೆಯೇ ಸಾಕ್ಷಿ.

ಬೆಂಗಳೂರಿನ ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿ ಶೋಭಿಕಾ ಅವರು ಶಾಲಾ ಶಿಕ್ಷಣ ಪೂರೈಸಿದರು. 2013ರಲ್ಲಿ ವಾರಂಗಲ್‌ನ ಎನ್‌ಐಟಿಯಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪಡೆದರು.

ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂಬುದು ಶೋಭಿಕಾ ಅವರ ಕನಸಾಗಿತ್ತು. ಈ ಹಿನ್ನೆಲೆ ಶೋಭಿಕಾ ಅವರು ಇನ್ಕಮ್ ಟ್ಯಾಕ್ಸ್ ಅಧಿಕಾರಿಯಂತಹ ಜವಾಬ್ದಾರಿಯುತ ಹುದ್ದೆಯಲ್ಲಿದ್ದರೂ, ಅವರು ತಮ್ಮ ಸತತ ಪ್ರಯತ್ನ ಮುಂದುವರಿಸಿದರು.

ಶೋಭಿಕಾ ಅವರು 2020ರಲ್ಲಿ ಮೊದಲ ಬಾರಿಗೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ 248ನೇ ರ‍್ಯಾಂಕ್ ಗಳಿಸಿ ಐಆರ್‌ಎಸ್ ಅಧಿಕಾರಿಯಾಗಿ ಆಯ್ಕೆಯಾಗಿ ಆದಾಯ ತೆರಿಗೆ ಇಲಾಖೆ ಸೇರಿದರು. ಐಆರ್‌ಎಸ್ ಅಧಿಕಾರಿಯಾದರೂ ಶೋಭಿಕಾ ಅವರ ಮನಸ್ಸು ಐಎಎಸ್ ಕಡೆಗೆ ಇತ್ತು.

ತಮ್ಮ ಕನಸನ್ನು ನನಸಾಗಿಸಿಕೊಳ್ಳಲು, ಶೋಭಿಕಾ ಅವರು 2024ರ ಯುಪಿಎಸ್‌ಸಿ ಪರೀಕ್ಷೆ ಬರೆದರು. ಅವರು 37ನೇ ರ‍್ಯಾಂಕ್ ಗಳಿಸುವ ಮೂಲಕ ಐಎಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾದರು. ಈ ಮೂಲಕ ದೇಶಾದ್ಯಂತ ಸಾವಿರಾರು ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಮಾದರಿಯಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026