Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕಾಂಗ್ರೆಸ್ ಬದುಕು ಕೊಟ್ಟರೆ, ಬಿಜೆಪಿ ಅದನ್ನು ಕಸಿಯಲು ಹೊರಟಿದೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಬದುಕು ಕೊಟ್ಟರೆ
, ಬಿಜೆಪಿ ಅದನ್ನು ಕಸಿಯಲು ಹೊರಟಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರು ಬಿಜೆಪಿ ವಿರುದ್ಧ ಹರಿಹಾಯ್ದರು.

ಮನರೇಗಾ ಪುನರ್ ಸ್ಥಾಪನೆವರೆಗೂ ನಮ್ಮ ಹೋರಾಟ ನಿರಂತರ. ಸ್ವಾತಂತ್ರ್ಯದ ಮರುಕ್ಷಣದಿಂದಲೇ ದೇಶ ಕಟ್ಟುವ ಕೆಲಸ ಮಾಡಿದ್ದು ನಮ್ಮ ಕಾಂಗ್ರೆಸ್. ನೀರಾವರಿ ಯೋಜನೆಗಳು, ಹಸಿರು ಕ್ರಾಂತಿ, ಕ್ಷೀರ ಕ್ರಾಂತಿ, ಭೂ-ಸುಧಾರಣೆಗಳ ಮೂಲಕ ಗ್ರಾಮೀಣ ಬದುಕನ್ನು ಕಟ್ಟಿ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುತ್ತ ಸಾಗಿದ್ದು ಕಾಂಗ್ರೆಸ್ ಎಂದು ಸಚಿವರು ತಿಳಿಸಿದರು.

ಗ್ರಾಮೀಣ ಜನತೆಗೆ ಉದ್ಯೋಗ ಒಂದು ಸಾಂವಿಧಾನಿಕ ಹಕ್ಕು ಎಂಬುದನ್ನು ಪರಿಗಣಿಸಿ ಪ್ರತಿ ವರ್ಷ 100 ದಿನಗಳ ಉದ್ಯೋಗ ನೀಡುವ ಯೋಜನೆ ರೂಪಿಸಿ ಅದಕ್ಕೆ ಮಹಾತ್ಮ ಗಾಂಧೀಜಿಯವರ ಹೆಸರಿಟ್ಟು ಸಾರ್ಥಕತೆ ಮೆರೆದಿದ್ದು ಕಾಂಗ್ರೆಸ್.

ರಾಜ್ಯದಲ್ಲಿಯೂ ಕೆರೆ ಕಟ್ಟೆ ತುಂಬಿಸಿ, ಬರದ ನಾಡಿಗೂ ನೀರು ಹರಿಸಿ, ಬರಡು ನೆಲದಲ್ಲೂ ರೈತ ಬಂಗಾರ ಬೆಳೆಯುವಂತೆ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಬಡವರಿಗಾಗಲಿ, ರೈತರಿಗಾಗಲಿ, ಕೂಲಿ ಕಾರ್ಮಿಕರಿಕಾಗಾಗಲಿ ಯಾವ ಒಂದು ಹೊಸ ಯೋಜನೆಯನ್ನೂ ನೀಡದ ಬಿಜೆಪಿಯು ನಮ್ಮ & ಗಾಂಧೀಜಿಯ ಸ್ವಾವಲಂಬಿ ಗ್ರಾಮದ ಕನಸಿನ 'ಮನರೇಗಾ' ಯೋಜನೆಯನ್ನು ರದ್ದುಗೊಳಿಸಿ, 'ವಿಬಿ ಗ್ರಾಮ್ ಜಿ' ಎಂಬ ಯೋಜನೆ ಜಾರಿ ಹೆಸರಿನಲ್ಲಿ ಗ್ರಾಮೀಣರ ಬದುಕಿಗೆ ಮರಣ ಶಾಸನ ಬರೆಯುತ್ತಿದೆ. ಇದನ್ನು ಕೈಬಿಟ್ಟು ಮನರೇಗಾ ಪುನರ್ ಸ್ಥಾಪಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ಎಂ.ಬಿ ಪಾಟೀಲ್ ಎಚ್ಚರಿಸಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ