LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಕ್ರಮ ಗೋ ಮಾಂಸ ಸಾಗಾಟ ; ಇಬ್ಬರು ಅರೆಸ್ಟ್

ಮಂಗಳೂರು : ಭಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಇಂದು (ಮಾ.10) ಮುಂಜಾನೆ ನಡೆದಿದೆ.

ಟೆಂಪೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ದೊರಕಿದ್ದು, ಅವರು ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ. ಬಳಿಕ ಗೋ ಮಾಂಸ ಪತ್ತೆಯ ಕುರಿತು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆಜಿಗೂ ಅಧಿಕ ಗೋ ಮಾಂಸ ಇರುವುದು ಪತ್ತೆಯಾಗಿದೆ. ನಂತರ ಪೊಲೀಸರು ಗೋ ಮಾಂಸ ಹಾಗೂ ವಾಹನವನ್ನು ಜಪ್ತಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನ ವಚನ: -ನೀಲಮ್ಮ ಅವರ ವಚನ..!ಸಾಮರಸ್ಯ ಸಾರುವ- ಸಂಕ್ರಾಂತಿ ಹಬ್ಬ: ಬೇರೆ ರಾಜ್ಯಗಳಲ್ಲಿನ ವಿಶೇಷತೆ ಏನು.?ಮೆಕ್ಕೆಜೋಳ ಪ್ರತಿ ಕ್ವಿಂಟಾಲ್‍ಗೆ ರೂ.2,150 ನಿಗದಿ  -ಜಿಲ್ಲಾಧಿಕಾರಿ ಟಿ.ವೆಂಕಟೇಶ್..!ಪ್ರೋತ್ಸಾಹಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನವಿದ್ಯಾರ್ಥಿನಿಯರಿಗಾಗಿ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆ - ಪ್ರಾಣಿಬಲಿ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಈ ರೀತಿಯಾದ ಶ್ರೀಕೃಷ್ಣನ ಮೂರ್ತಿ ಇಟ್ಟು ಪೂಜಿಸಿ ನೋಡಿ ಸಂತಾನ ಪ್ರಾಪ್ತಿ ಗ್ಯಾರಂಟಿ?ಇಂದಿನ ವಚನ: - --ಸಿದ್ಧರಾಮೇಶ್ವರ   ಅವರ ವಚನ..!ಟಾಕ್ಸಿಕ್ ಸಿನಿಮಾದ ಫ್ಲೆಕ್ಸ್ ಅಳವಡಿಕೆ ನಟ ಯಶ್ ವಿರುದ್ಧ FIR.!ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ 26ನೇ ವರ್ಷದ ದೀಪೋತ್ಸವ