LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಕ್ರಮ ಗಣಿಗಾರಿಕೆ ಕೇಸ್: ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ತೀರ್ಪು-7 ವರ್ಷ ಜೈಲು

ನವದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.

ಪ್ರಕರಣ ಸಂಬಂಧ ಹಿಂದೂ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು. ವಿಚಾರಣೆಯ ಬಳಿಕ ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಇನ್ನು ಗಾಲಿ ಜನಾರ್ದನ ರೆಡ್ಡಿ, ಶ್ರೀನಿವಾಸ್ ರೆಡ್ಡಿ ಮತ್ತು ಮೆಫಾಜ್ ಅಲಿ ಖಾನ್ ಸೇರಿದಂತೆ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಅವಿಭಜಿತ ಆಂಧ್ರಪ್ರದೇಶ ಗಣಿ ಸಚಿವೆಯಾಗಿದ್ದ ಸಬಿತಾ ಇಂದ್ರರೆಡ್ಡಿ, ಕೃಷ್ಣ ನಂದಾಗೆ ಕೋರ್ಟ್ ಕ್ಲೀನ್‌ಚಿಟ್ ನೀಡಿದೆ.

2009 ರಲ್ಲಿ ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಹಾಗೂ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸಿಬಿಐ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿತು. 2011 ರಲ್ಲಿ ಸಿಬಿಐ ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿತ್ತು. ಬಳಿಕ ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ, ಗಾಲಿ ಜನಾರ್ದನ ರೆಡ್ಡಿ ಅವರ ಆಪ್ತ ಸಹಾಯಕ ಮೆಫಾಜ್ ಅಲಿ ಖಾನ್ ಮತ್ತು ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಸೇರಿದಂತೆ 9 ಆರೋಪಿಗಳ ಹೆಸರನ್ನು ಸೇರಿಸುವ ಪೂರಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
08-01-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.!ಇಂದಿನ ವಚನ : ವಚನ ಭಂಡಾರಿ ಶಾಂತರಸ !ಅಳಿವಿನಂಚಿನಲ್ಲಿರುವ 15 ಭಾರತೀಯ ರಣಹದ್ದುಗಳ ಬಿಡುಗಡೆರಾಜ್ಯಾದ್ಯಂತ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್‌ಗಳನ್ನು ಒದಗಿಸಲು ಮುಂದಾದ ಸರ್ಕಾರರೈಲ್ವೆ ಇಲಾಖೆ ಮಹತ್ವದ ನಿರ್ಧಾರ - ಆನ್‌ಲೈನ್ ಟಿಕೆಟ್ ಬುಕಿಂಗ್‌ಗೆ ಆಧಾರ್ ಲಿಂಕ್ ಕಡ್ಡಾಯಸಿಂಹ ರಾಶಿ ವರ್ಷ ಭವಿಷ್ಯ 2026: ಈ ವರ್ಷ ಸಿಂಹ ರಾಶಿಗೆ ಅದೃಷ್ಟದ ಮಳೆ!ಕಾರು ಪಲ್ಟಿ: ಕಾರು ಸಹಿತ ಇಬ್ಬರ ದಹನ22 ವರ್ಷಕ್ಕೆ ಯುಪಿಎಸ್‌ಸಿ ಪಾಸ್‌, ಮೋನಿಕಾ ಯಾದವ್ ಅವರ ಸ್ಫೂರ್ತಿದಾಯಕ ಕಥೆರೈತರಿಗೆ ಗುಡ್ ನ್ಯೂಸ್ .! ನಿಮ್ಮ ಜಮೀನಿನ ಇ-ಖಾತಾವನ್ನು ಮನೆಯಲ್ಲಿ ಪಡೆಯಿರಿ.! ಹೇಗೆ ಅಂತೀರ.?ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಹಾಗೂ ಬ್ಯಾಕ್ ಲಾಗ್ ಹುದ್ದೆಗಳ ಬಗ್ಗೆ ಮಾಹಿತಿ.!