LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈರುಳ್ಳಿ ಬೆಳೆಗಾರರಿಗೆ ಮುಖ್ಯ ಮಾಹಿತಿ.! ಈರುಳ್ಳಿ ವಿಮಾ ನೊಂದಣಿ ಆರಂಭ.!

 

ಚಿತ್ರದುರ್ಗ: 2024-25ನೇ ಸಾಲಿನ ಹಿಂಗಾರು ಹಂಗಾಮಿನ ಈರುಳ್ಳಿ ನೀರಾವರಿ ಬೆಳೆಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದೆ.

ಚಿತ್ರದುರ್ಗ ತಾಲ್ಲೂಕು ಕಸಬಾ ಹಾಗೂ ತುರುವನೂರು, ಚಳ್ಳಕೆರೆ ತಾಲ್ಲೂಕಿನ ಕಸಬಾ ಹಾಗೂ ತಳಕು, ಹಿರಿಯೂರು ತಾಲ್ಲೂಕಿನ ಐಮಂಗಲ ಹಾಗೂ ಜೆ.ಜಿ.ಹಳ್ಳಿ ಹೋಬಳಿಗೆ ಈರುಳ್ಳಿ ನೀರಾವರಿ ಬೆಳೆಯನ್ನು ಅಧಿಸೂಚಿಸಲಾಗಿದೆ. ಶೇ.90 ಇಡಿಮ್ಮಿಟಿ ಮಟ್ಟದ ನೀರಾವರಿ ಈರುಳ್ಳಿ ವಿಮೆ ಮೊತ್ತ ಹೆಕ್ಟೇರ್‌ಗೆ ರೂ.80500 ಇದ್ದು, ಇದರ ಶೇ.5 ರಷ್ಟು ರೈತ ವಿಮಾ ಕಂತು ರೂ.4025 ಆಗಿದೆ. ದಿ ಓರಿಯಂಟಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಕಂಪನಿಯಾಗಿ ಜಿಲ್ಲೆಗೆ ನಿಗಧಿಪಡಿಸಲಾಗಿದೆ.

ಬೆಳೆ ವಿಮೆ ನೊಂದಣಿಗೆ ಡಿಸೆಂಬರ್ 30 ಕಡೆಯ ದಿನವಾಗಿದೆ. ರೈತರು ವಿಮೆಯನ್ನು ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ ಹಾಗೂ ಆರ್ಥಿಕ ಸಂಸ್ಥೆಗಳಲ್ಲಿ ನೊಂದಣಿ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆ ಕಚೇರಿ, ರೈತ ಸಂಪರ್ಕ ಕೇಂದ್ರ ಅಥವಾ ಹತ್ತಿರದ ಬ್ಯಾಂಕುಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಪ್ಪಿನಿಂದ ಅದೃಷ್ಟ, ಆರೋಗ್ಯ, ಐಶ್ವರ್ಯ ಮತ್ತು ಲಕ್ಷ್ಮಿ ಕೃಪಾಕಟಾಕ್ಷ ! ಹಿಂದೂ ಧರ್ಮದಲ್ಲಿ ಉಪ್ಪಿಗಿದೆ ವಿಶೇಷ ಸ್ಥಾನಎಸ್ಸಿಪಿ. ಟಿಎಸ್ಪಿ. ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ವಿರೋಧಿಸಿ ಪ್ರತಿಭಟನೆ.!08-08-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ- .!ವಚನ: -ಗುಪ್ತ ಮಂಚಣ್ಣ .!ಕೊಚ್ಚಿಯಲ್ಲಿ ಮೆಟ್ರೋ ಹಳಿಗಳಿಂದ ರಸ್ತೆಗೆ ಹಾರಿದ ಯುವಕ ಸಾವುಮಡೆನೂರು ಮನು ವಿರುದ್ಧದ ಪ್ರಕರಣ ಹಿಂಪಡೆದ ‌ನಟಿಕಂತೆ ಕಂತೆ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾಸಾವಿಗೆ ಸಂಸದ ಡಾ. ಕೆ ಸುಧಾಕರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತ