LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವೃತ್ತಿಪರ  ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ.!

ಬೆಂಗಳೂರು: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಘೋಷಿಸಿದ್ದಾರೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 17ರಿಂದ ಆರಂಭವಾಗಲಿದೆ.

ಇದೇ ಸಂದರ್ಭದಲ್ಲಿ ಸಚಿವರು ಇತರ ಪರೀಕ್ಷೆಗಳ ವೇಳಾ ಪಟ್ಟಿಯನ್ನೂ ಪ್ರಕಟಿಸಿದರು.

ಕ್ರೈಸ್ ಪರೀಕ್ಷೆ ಮಾರ್ಚ್ 1, ಪಿಜಿಸಿಇಟಿ (ಎಂಬಿಎ, ಎಂಸಿಎ) ಪರೀಕ್ಷೆ ಮೇ 14ರಂದು, ಪಿಜಿಸಿಇಟಿ (ಎಂಇ/ಎಂ.ಟೆಕ್) ಹಾಗೂ ಡಿಸಿಇಟಿ ಪರೀಕ್ಷೆಗಳು ಮೇ 23ರಂದು ನಡೆಯಲಿವೆ.

ಎಂಎಸ್ಸಿ ನರ್ಸಿಂಗ್, ಎಂಪಿಟಿ, ಎಂ.ಎಸ್ಸಿ-ಎಎಚ್ ಎಸ್ ಪರೀಕ್ಷೆ ಗಳು ಜು.18ರಂದು, ಅಕ್ಟೋಬರ್ 11ರಂದು ಕೆಸೆಟ್ ಹಾಗೂ ನವೆಂಬರ್ 21ರಂದು ಎಂ-ಫಾರ್ಮಾ ಹಾಗೂ ಫಾರ್ಮಾ-ಡಿ ಪರೀಕ್ಷೆ ಗಳನ್ನು ನಡೆಸಲಾಗುವುದು ಎಂದು ಸಚಿವರು ಘೋಷಿಸಿದರು.

ಈ ಸಂದರ್ಭದಲ್ಲಿ ಸಚಿವ ಶರಣ್ ಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬು ಗೋಯಲ್, KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಸೇರಿದಂತೆ ಇತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ-ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ ಅವರ ವಚನ..ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ : 6 SDPI ಕಾರ್ಯಕರ್ತರಿಗೆ ಕಠಿಣ ಶಿಕ್ಷೆಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು - ಮೂರು ಬೋಗಿಗಳು ಪಥಭ್ರಷ್ಟಓಲಾ, ಊಬರ್‌ಗೆ ಸವಾಲು - ಭಾರತ್ ಟ್ಯಾಕ್ಸಿಗೆ ಅಧಿಕೃತ ಚಾಲನೆನಾಯಿ ಸಾಕುವವರ ನಿರ್ಲಕ್ಷ್ಯವೇ ಗಲಾಟೆಗೆ ಕಾರಣ: ಹೈಕೋರ್ಟ್‌ ಬೇಸರಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2273 ಹುದ್ದೆ ಖಾಲಿ : ಪದವೀಧರರಿಂದ ಅರ್ಜಿ ಆಹ್ವಾನಮುಂಬೈಯಲ್ಲಿ ಲಿಫ್ಟ್ ಒಳಗೆ ಹೈಡ್ರೋಜನ್ ಬಲೂನ್ ಸ್ಫೋಟ - ಇಬ್ಬರಿಗೆ ಗಾಯ22ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾದ ಮೋನಿಕಾ ಯಾದ್‌ ಸ್ಪೂರ್ತಿದಾಯಕ ಕಥೆಕೊನೆಗೂ ಶುಕ್ರ ಕಣ್ಣು ಬಿಟ್ಟ! ಈ ರಾಶಿಗಳಿಗೆ ಅಕ್ಟೋಬರ್ ತನಕ ರಾಜಯೋಗ.. ಶುಕ್ರದೆಸೆ ಯಾರಿಗೆ?ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-02-2026 .!