LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ಇಲಾಖೆ ಮುನ್ಸೂಚನೆ

ಬೆಂಗಳೂರು,ಜೂ.03 : ಕರಾವಳಿಯಲ್ಲಿ ಮಳೆ ಆರ್ಭಟ ತಗ್ಗಿದೆ. ಒಳನಾಡಲ್ಲಿ ನಾಳೆಯಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯ ಹವಾಮಾನ ಇಂದು ಎಲ್ಲಾ ಕಡೆ ಒಣಹವೆ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣ ಇರಲಿದ್ದು, ತಂಪಾದ ವಾತಾವರಣ ಇರಲಿದೆ. ಬುಧವಾರ ಜೂನ್ 4 ರಂದು ಮಾತ್ರ 18 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಎಲ್ಲೆಲ್ಲಿ ಭಾರಿ ಮಳೆ ಅಲರ್ಟ್: ಬೆಳಗಾವಿ, ಹಾವೇರಿ, ಧಾರವಾಡ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (30-40 ಕಿ.ಮೀ ವೇಗದಲ್ಲಿ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (30-40 ಕಿ.ಮೀ ವೇಗದಲ್ಲಿ) ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST