Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ದೇಶದ ಮೊದಲ ಹೆಲಿಕಾಪ್ಟರ್ ಜೋಡಣಾ ಘಟಕ ಉದ್ಘಾಟನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡನಾಡಿನ ಹಿರಿಮೆಗೆ ಮತ್ತೊಂದು ಗರಿ! ಕೋಲಾರದಲ್ಲಿ ದೇಶದ ಮೊಟ್ಟ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕ ಉದ್ಘಾಟನೆ ಆಗಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ನಿರ್ಮಾಣ ಗುರಿ ಹೊಂದಲಾಗಿದೆ. ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾಏರ್ ಬಸ್ H125 ಲೈಟ್ ಹೆಲಿಕಾಪ್ಟರ್ ಅಂತಿಮ ಹಂತದ ಜೋಡಣಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದೆ ಎಂದು ಸಚಿವರು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ  EmmanuelMacron ಅವರು ವರ್ಚುವಲ್ ಮೂಲಕ ಪಾಲ್ಗೊಂಡರು. ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್  ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು.

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್  ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಈ ಘಟಕವು ರಾಜ್ಯದಲ್ಲಿ ಕಾರ್ಯಾರಂಭ ಮಾಡುತ್ತಿರುವುದು ಐತಿಹಾಸಿಕ ಸಾಧನೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿದೆ.

ಈ ಘಟಕಕ್ಕೆ ನಾನು ಕೈಗಾರಿಕಾ ಸಚಿವನಾದ ಮೇಲೆ 17 ಎಕರೆ ಜಾಗ ಕೊಟ್ಟಿದ್ದು  ದಾಖಲೆ ಅವಧಿ ಅಂದರೆ ಒಂದೂವರೆ ವರ್ಷದಲ್ಲಿ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ ಎಂದು ಸಚಿವ ಪಾಟೀಲ್ ತಿಳಿಸಿದರು.

 ಯೋಜನೆಗೆ ತ್ವರಿತ ಗತಿಯಲ್ಲಿ ಅನುಮೋದನೆ, ಇಲಾಖೆಗಳ ನಡುವೆ ಅತ್ಯುತ್ತಮ ಸಮನ್ವಯ, ಮೂಲಸೌಕರ್ಯ ಸನ್ನದ್ಧತೆ ಮತ್ತು ಕೈಗಾರಿಕಾ ಪಾಲುದಾರರೊಂದಿಗೆ ಸಕ್ರಿಯ ಪಾಲ್ಗೊಳ್ಳುವಿಕೆಗಳಿಂದ ಈ ಚಾರಿತ್ರಿಕ ಯೋಜನೆ ಕ್ಷಿಪ್ರಗತಿಯಲ್ಲಿ ಅನುಷ್ಠಾನಗೊಂಡಿದೆ.

ನಾಗರಿಕ ವಿಮಾನಯಾನ ಸಚಿವರು, ಎನ್. ಚಂದ್ರಶೇಖರನ್ -ಟಾಟಾ ಸನ್ಸ್ ಅಧ್ಯಕ್ಷರು, ಮಲ್ಲೇಶ್ ಬಾಬು- ಕೋಲಾರ ಸಂಸದರು, ಟಾಟಾ ಮತ್ತು ಏರ್ ಬಸ್ ಅಧಿಕಾರಿಗಳು ಹಾಗೂ ಉದ್ಯಮ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಐತಿಹಾಸಿಕ ಯೋಜನೆ ಸಾಧ್ಯವಾಗಲು ಶ್ರಮಿಸಿದ ಎಲ್ಲರಿಗೂ ಹಾರ್ದಿಕ ಅಭಿನಂದನೆಗಳನ್ನು ಎಂ.ಬಿ ಪಾಟೀಲ್ ಅರ್ಪಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ