
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ವ್ಯಾಪ್ತಿಯ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮಾಗಡಿ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ನಗರ ಪಾಲಿಕೆ ಪ್ರಥಮ ದರ್ಜೆ ಕಾಲೇಜು ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರು ಇಂದು ಉದ್ಘಾಟಿಸಿ ಮಾತನಾಡಿದ ಅವರು ಜಿಬಿಎ ವ್ಯಾಪ್ತಿಯ ಕೇಂದ್ರ ನಗರ ಪಾಲಿಕೆ ವತಿಯಿಂದ ನಿರ್ಮಿಸಿರುವ ಈ ಕಟ್ಟಡದಲ್ಲಿ ಎಲ್.ಕೆ.ಜಿ. ಯಿಂದ ಪಿ.ಜಿ. ವರೆಗೆ ಶಿಕ್ಷಣ ಲಭ್ಯವಿದ್ದು* ಮಕ್ಕಳು ಈ ಶಾಲೆ-ಕಾಲೇಜಿನಲ್ಲಿ ವ್ಯಾಸಂಗ ಪಡೆದು ಉನ್ನತ ಮಟ್ಟದ ಸಾಧನೆ ಮಾಡಲು ಕರೆ ನೀಡಿದರು.
ಅಮೃತ್ ನಗರೋತ್ಥಾನ ಯೋಜನೆ ಅಡಿಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಈ ನೂತನ ಕಟ್ಟಡಗಳು ನಿರ್ಮಾಣಗೊಂಡಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಉದ್ದೇಶದಿಂದ ಎರಡು ಪ್ರತ್ಯೇಕ ಕಟ್ಟಡಗಳನ್ನು ನಿರ್ಮಿಸಲಾಗಿದೆ.
*ಕಟ್ಟಡಗಳ ವಿವರಗಳು:*
* ಕಟ್ಟಡ–1ರಲ್ಲಿ 6 ತರಗತಿ ಕೊಠಡಿಗಳು ಹಾಗೂ ಶೌಚಾಲಯ ಸೌಲಭ್ಯಗಳು ಲಭ್ಯವಿವೆ.
* ಕಟ್ಟಡ–2 ರಲ್ಲಿ 6 ತರಗತಿ ಕೊಠಡಿಗಳು, ಶೌಚಾಲಯಗಳು ಹಾಗೂ ಸೆಲ್ಲರ್ (ಊಟದ ಕೊಠಡಿ) ವ್ಯವಸ್ಥೆ ಕಲ್ಪಿಸಲಾಗಿದೆ.
* ಈ ನೂತನ ಕಟ್ಟಡಗಳ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಉನ್ನತ ಶಿಕ್ಷಣದ ವಿಸ್ತರಣೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ.

*ಬಿ.ಸಿ.ಎ. ಮತ್ತು ಎಂ.ಸಿ.ಎ. ಕೋರ್ಸ್ ಗೆ ಬೇಡಿಕೆ:*
ಈ ಕಾಲೇಜಿನಲ್ಲಿ ಬಿ.ಸಿ.ಎ ಮತ್ತು ಎಂ.ಸಿ.ಎ ಕೋರ್ಸ್ ಗೆ ಬೇಡಿಕೆ ಸಲ್ಲಿಸಿದ್ದು, ಅಧಿಕಾರಿಗಳು ಅದಕ್ಕೆ ಅನುಮೋದನೆ ನೀಡಿ ಬಡ ವಿದ್ಯಾರ್ಥಿಗಳು ಇಂತಹ ಕೋರ್ಸ್ ಗಳ ಕಲಿಯಲು ಅನುಕೂಲ ಕಲ್ಪಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
*ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಹೇಮಂತ್ ಶರಣ್*
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್ ರವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ನಗರ ಪಾಲಿಕೆ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾತಿ ಪಡೆದುಕೊಳ್ಳಲು ಹಾಗೂ ನಗರ ಪಾಲಿಕೆಯು ವಿದ್ಯಾರ್ಥಿಗಳಿಗೆ ನೀಡುವ ಮೂಲಭೂತ ಸೌಕರ್ಯಗಳನ್ನು ಪಡೆದುಕೊಳ್ಳಲು ತಿಳಿಸಿದರು.

ಈ ವೇಳೆ ಕೇಂದ್ರ ನಗರ ಪಾಲಿಕೆ ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಅಭಿಯಂತರರಾದ ಚಂದ್ರಶೇಕರ್, ಕಾರ್ಯಪಾಲಕ ಅಭಿಯಂತರರಾದ ಮಧುಸೂಧನ್, ಶಿಕ್ಷಣ ವಿಭಾಗದ ಅಧಿಕಾರಿಗಳು, ಮಾಜಿ ನಗರ ಪಾಲಿಕೆ ಸದಸ್ಯರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.