ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ
ಚಿತ್ರದುರ್ಗ: ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.50,000/- ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
https://gokdom.kar.nic.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಷರತ್ತುಗಳು: ಸಾಮೂಹಿಕ ವಿವಾಹಗಳಲ್ಲಿ ಕನಿಷ್ಟ 10 ಜೋಡಿಗಳು ಭಾಗವಹಿಸಿರಬೇಕು. ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಟ 18 ವರ್ಷದಿಂದ ಗರಿಷ್ಟ 42 ವರ್ಷಗಳು ವರನಿಗೆ ಕನಿಷ್ಟ 21 ವರ್ಷದಿಂದ ಗರಿಷ್ಟ 45 ವರ್ಷ ವಯಸ್ಸು ಆಗಿರಬೇಕು. ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯ ರೂ.2.20 ಲಕ್ಷಗಳು ಮತ್ತು ಒಟ್ಟಾರೆಯಾಗಿ ರೂ.5 ಲಕ್ಷಗಳನ್ನು ಮೀರಿರಬಾರದು.
ಕನಿಷ್ಟ ಏಳು ದಿನಗಳ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸಬೇಕು. ಪ್ರೋತ್ಸಾಹಧನ ಪಡೆಯಲು ಮದುವೆ ದಿನಾಂಕದ 03 ತಿಂಗಳ ಒಳಗಾಗಿ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅವರ ಕಚೇರಿಗೆ ನಿಗಧಿತ ನಮೂನೆಯಲ್ಲಿ ಮದುವೆ ಪ್ರಮಾಣ ಪತ್ರ ಮತ್ತು ಇತರೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.