LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಹೆಚ್ಚಳ; ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಸಿಎಂ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್‌ನಲ್ಲಿ ಪೊಲೀಸ್ ವಿಭಾಗಗಳ ಸಂಖ್ಯೆಯನ್ನು ಎಂಟರಿಂದ 11 ಕ್ಕೆ ಹೆಚ್ಚಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.

ಪ್ರಸ್ತುತ ಬೆಂಗಳೂರು ಉತ್ತರ, ದಕ್ಷಿಣ, ಮಧ್ಯ, ಪೂರ್ವ, ಪಶ್ಚಿಮ, ಆಗ್ನೇಯ, ಈಶಾನ್ಯ ಮತ್ತು ವೈಟ್‌ಫೀಲ್ಡ್ ಸೇರಿ ಎಂಟು ಪೊಲೀಸ್ ವಿಭಾಗಗಳಿವೆ.

ಇಂದು ವಿಧಾನಸಭೆಯಲ್ಲಿ 2025-26ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಇನ್ನೂ ಮೂರು ಪೊಲೀಸ್ ವಿಭಾಗಗಳೊಂದಿಗೆ, ಪೊಲೀಸ್ ಠಾಣೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ನಗರದಲ್ಲಿ ಇನ್ನೂ ಮೂವರು ಐಪಿಎಸ್ ಅಧಿಕಾರಿಗಳನ್ನು ಡಿಸಿಪಿಗಳಾಗಿ ನೇಮಿಸಲಾಗುವುದು. ಪ್ರತಿದಿನ ಹೆಚ್ಚಿನ ಸೈಬರ್ ಅಪರಾಧಗಳು ವರದಿಯಾಗುತ್ತಿರುವುದರಿಂದ ಐದು ಕೋಟಿ ರೂ. ಅನುದಾನದೊಂದಿಗೆ ಸೈಬರ್ ಅಪರಾಧ ವಿಭಾಗವನ್ನು ಸಹ ಬಲಪಡಿಸಲಾಗುವುದು ಎಂದರು.

ಶೀಘ್ರದಲ್ಲೇ ಏಳು ಪೊಲೀಸ್ ಠಾಣೆ ಕಟ್ಟಡಗಳು ಪೂರ್ಣಗೊಳ್ಳಲಿವೆ. ಇದಲ್ಲದೆ, 30 ಕೋಟಿ ರೂ. ವೆಚ್ಚದಲ್ಲಿ 12 ಪೊಲೀಸ್ ಠಾಣೆಗಳು, ಒಂದು ಉಪವಿಭಾಗ ಕಚೇರಿ, ಎರಡು ವೃತ್ತ ಕಚೇರಿಗಳು ಮತ್ತು ಒಂದು ಪೊಲೀಸ್ ಔಟ್ ಪೋಸ್ಟ್ ಕಟ್ಟಡದ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು.



ಈ ವರ್ಷ ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ನಾಲ್ಕು ಬಾಂಬ್ ಪತ್ತೆ ಮತ್ತು ವಿಲೇವಾರಿ ದಳಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ತಿಳಿಸಿದರು.

ಪೊಲೀಸ್ ಸಿಬ್ಬಂದಿಯನ್ನು ಸದೃಢವಾಗಿ ಮತ್ತು ಆರೋಗ್ಯವಾಗಿಡಲು, ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ವೈಯಕ್ತಿಕ ಆರೋಗ್ಯ ತಪಾಸಣೆಗಾಗಿ ನೀಡಲಾಗುವ ಮೊತ್ತವನ್ನು ಪ್ರಸ್ತುತ ರೂ. 1000 ರಿಂದ ರೂ. 1500 ಕ್ಕೆ ಹೆಚ್ಚಿಸಲಾಗುವುದು. ಬಂದೋಬಸ್ತ್ ಕರ್ತವ್ಯದಲ್ಲಿರುವ ಪೊಲೀಸರು ಮತ್ತು ಸಿಬ್ಬಂದಿಗೆ ನೀಡಲಾಗುವ ಆಹಾರ ಭತ್ಯೆಯನ್ನು ರೂ. 200 ರಿಂದ 300 ರೂ. ಗೆ ಹೆಚ್ಚಿಸಲಾಗುವುದು ಎಂದರು.

ನಕ್ಸಲ್ ನಿಗ್ರಹ ಪಡೆ ವಿಸರ್ಜನೆ

ರಾಜ್ಯವು ನಕ್ಸಲ್ ಮುಕ್ತವಾಗಿದ್ದು, ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ಮಾಡಲಾಗುತ್ತಿದೆ. ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು 10 ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡಲಾಗುವುದು ಎಂದು ಸಿಎಂ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪಸಮಾನತೆಗೆ ಪೂರಕವಾಗಿ ಗ್ಯಾರಂಟಿ ಯೋಜನೆಗಳು ಜಾರಿ:  ಶಾಸಕ ಟಿ.ರಘುಮೂರ್ತಿ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-01-2026.!ಇಂದಿನ ವಚನ: -ಹಡಪದ ಅಪ್ಪಣ್ಣ  ಅವರ ವಚನ..!ಫೆ. 1 ರಂದು ಹಿಂದೂ ಸಂಗಮ ಕಾರ್ಯಕ್ರಮ: ಅಧ್ಯಕ್ಷ ಅನಿತ್ ಕುಮಾರ್.!ಕಾಂಗ್ರೆಸ್ ಪಕ್ಷಕ್ಕೆ ನಿರಾಳ .!ಅಬ್ಬಾ ಕಾರಣ ಬ್ಯಾಲೆಟ್ ಪೇಪರ್ ಮೂಲಕ ಮತ್ರ ಮತಚಲಾವಣೆ.!