LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ: 'ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿಲ್ಲ'- ಸಿಎಂ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳ ಆಗ್ತಿರೋ ಹಿನ್ನಲೆ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲು ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿ ಅಂತ ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.



ಕೊರೊನಾ ಸಂಬಂಧ ಸೋಮವಾರ ಸಭೆ ನಡೆಸಿದ ಬಗ್ಗೆ ವಿಧಾನಸೌಧದಲ್ಲಿ ಮಾಹಿತಿ ನೀಡಿದ ಅವರು, ಸೋಮವಾರ ಕೋವಿಡ್ ಸಂಬಂಧ ಸಭೆ ಮಾಡಿದ್ದೇನೆ. ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಜೊತೆ ಸಭೆ ಮಾಡಿದ್ದೇನೆ. ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಎಲ್ಲದಕ್ಕೂ ತಯಾರಿರುವಂತೆ ಸೂಚನೆ ಕೊಟ್ಟಿದ್ದೇನೆ. ವೆಂಟಿಲೇಟರ್, ಆಕ್ಸಿಜನ್, ಪಿಪಿಇ ಕಿಟ್, ಬೆಡ್ ಯಾವುದರ ಕೊರತೆ ಇರಬಾರದು ಎಂದು ಸೂಚಿಸಿದ್ದಾನೆ ಎಂದು ತಿಳಿಸಿದರು.

ವಾರ್ಡ್ಗಳನ್ನು ಸಿದ್ಧ ಮಾಡಲು ಸೂಚನೆ ನೀಡಿದ್ದೇನೆ. ಇದು ಅಷ್ಟು ಅಪಾಯಕಾರಿ ತಳಿ ಅಲ್ಲ. ಆದರೂ ಮುನ್ನೆಚ್ಚರಿಕೆಯಿಂದ ಇರಬೇಕು. ಮಕ್ಕಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಅವರನ್ನ ಶಾಲೆಗೆ ಕಳಿಸೋದು ಬೇಡ ಅಂತ ಹೇಳಿದ್ದೇವೆ. ವಯಸ್ಸಾದವರು, ವಿವಿಧ ಆರೋಗ್ಯ ಸಮಸ್ಯೆ ಇರೋರು ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.

ಲಸಿಕೆ ಸಿದ್ಧ ಮಾಡಿಕೊಳ್ಳಿ, ವ್ಯಾಕ್ಸಿನ್ ಖರೀದಿ ಮಾಡಿ ಇಟ್ಕೊಳ್ಳಿ ಅಂತ ಸೂಚನೆ ಕೊಟ್ಟಿದ್ದೇನೆ. ವಯಸ್ಸು ಆಗಿರೋದು, ಆರೋಗ್ಯ ಸಮಸ್ಯೆ ಇರೋರು ಮಾಸ್ಕ್ ಹಾಕಬೇಕು. ಏರ್ಪೋರ್ಟ್‌ನಲ್ಲಿ ಟೆಸ್ಟ್ ಮಾಡೋ ಬಗ್ಗೆ ನಿರ್ಧಾರ ಮಾಡಿಲ್ಲ. ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಆದರೂ ಎಚ್ಚರಿಕೆಯಿಂದ ಇರಲು ಹೇಳಿದ್ದೇನೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026