LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
💛

ಸ್ವತಂತ್ರ ಪತ್ರಿಕೋದ್ಯಮ ಬೆಂಬಲಿಸಲು ಲೇಖನದ ಕೆಳಭಾಗದಲ್ಲಿ UPI ಮೂಲಕ ಕಾಣಿಕೆ ನೀಡಿ!

State News

ಸ್ವಾತಂತ್ರ್ಯ ಹಬ್ಬದ ಹಿನ್ನೆಲೆ: ಭದ್ರತೆ, ಸಂಚಾರ ನಿರ್ವಹಣೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ಆಗಸ್ಟ್ 15ರಂದು ಬೆಂಗಳೂರಿನ ಐತಿಹಾಸಿಕ ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ರಾಜ್ಯದ ಮೊದಲ ಸಾರ್ವಜನಿಕ ‘ಸ್ವಾತಂತ್ರ್ಯ ಹಬ್ಬ–2026’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸ್ವಾತಂತ್ರ್ಯ ಹಬ್ಬದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನ, ವಾಹನ ನಿಲುಗಡೆ ಹಾಗೂ ಜನದಟ್ಟಣೆ ನಿರ್ವಹಣೆ ಸೇರಿದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸೌಧದಲ್ಲಿ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 10ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ‘ದಿ ಪೀಪಲ್ಸ್ ಇಂಡಿಯಾ ಪೆರೇಡ್’, ವಿಧಾನಸೌಧದ ವಿಶೇಷ ಪ್ರವಾಸ, ಮಕ್ಕಳಿಗಾಗಿ ‘ಮಕ್ಕಳ ಮೇಳ’, ರಸಪ್ರಶ್ನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಕಚೇರಿ, ವಿವಿಧ ಜಿಲ್ಲೆಗಳ ಆಹಾರ ಮತ್ತು ಕರಕುಶಲ ಪ್ರದರ್ಶನಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ. ಸಂಜೆ ಸಂಗೀತ ಕಾರ್ಯಕ್ರಮ ಹಾಗೂ ರಾತ್ರಿ ಪಟಾಕಿ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಇರುವುದರಿಂದ ವಿಶೇಷ ಗಮನಹರಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಸುಗಮ ಸಂಚಾರ ವ್ಯವಸ್ಥೆ, ಪಾದಚಾರಿಗಳ ಸುರಕ್ಷತೆ, ತುರ್ತು ಸೇವೆಗಳಿಗೆ ಅಗತ್ಯ ವ್ಯವಸ್ಥೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ ಸಚಿವರು, ಕಾರ್ಯಕ್ರಮದ ವೇಳೆ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ರೀತಿಯ ಲೋಪವಾಗದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಪೊಲೀಸ್ ಇಲಾಖೆ, ಜಿಬಿಎ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮಾಧ್ಯಮ ಬೆಂಬಲಿಸಿ / Support Local Journalism

ನಿಮ್ಮ ಬೆಂಬಲ ಸ್ವತಂತ್ರ ಪತ್ರಿಕೋದ್ಯಮವನ್ನು ಜೀವಂತವಾಗಿರಿಸುತ್ತದೆ. Scan & Pay directly via PhonePe, GPay or Paytm.

0% Gateway Commission — Money goes 100% directly into publisher bank account.
Scan with Any UPI App
Scan QR Code to Support News via UPI
Pre-filled: ₹10.00
UPI ID: khushihost1@ybl
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾವೇರಿ ವಿಶ್ವವಿದ್ಯಾಲಯದ ಇತಿಹಾಸ ಪಠ್ಯಕ್ರಮ ಕಾರ್ಯಾಗಾರ: ಪದವಿ ಪಠ್ಯದಲ್ಲಿ ಸ್ಥಳೀಯ ಇತಿಹಾಸಕ್ಕೆ ಆಧ್ಯತೆ ನೀಡಲು ಡಾ. ರಮೇಶ ಎನ್. ತೆವರಿ ಕರೆಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಆಗಸ್ಟ್ 18ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭಸ್ವಾತಂತ್ರ್ಯ ಹಬ್ಬದ ಹಿನ್ನೆಲೆ: ಭದ್ರತೆ, ಸಂಚಾರ ನಿರ್ವಹಣೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆಮನೆ ಪಕ್ಕದ ಬಾವಿ ಮುಚ್ಚಿದ ಆರೋಪಕ್ಕೆ ಈ ತಿರುಗೇಟು ಕೊಟ್ಟ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು!ಸಚಿವ ಸ್ಥಾನ ಸಿಗದಿರುವುದು ನೋವು ತಂದಿದೆ, ಬಿಜೆಪಿ ಸೇರೋ ಮಾತೇ ಇಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರುಸಾಗರ ನಗರಸಭೆಯಲ್ಲಿ ಬ್ರೋಕರ್‌ ಹಾವಳಿ ನಿಯಂತ್ರಣಕ್ಕೆ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು!ವಿಶ್ವ ಆನೆ ದಿನ: ವಂತಾರಾದ ಆನೆ ಸಂರಕ್ಷಣಾ ಅಭಿಯಾನ; ದೇಶ-ವಿದೇಶಗಳಲ್ಲಿ ಸೇವೆ ವಿಸ್ತರಣೆ