Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭಾರತ ಬಂದ್‌ ಆಗುತ್ತಾ ನಾಳೆ ?

ನವದೆಹಲಿ : ವಿವಿಧ ಸಂಘಟನೆಗಳು ಗುರುವಾರ ಭಾರತ ಬಂದ್ ಕರೆ ನೀಡಿವೆ. ಹೀಗಾಗಿ ಕೆಲವು ರಾಜ್ಯಗಳಲ್ಲಿ ಬಂದ್ ಪರಿಣಾಮ ಬೀರುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ವಿರೋಧಿಸಿ 10ಕ್ಕೂ ಹೆಚ್ಚು ಕಾರ್ಮಿಕ ಸಂಘಗಳು ಫೆ.12 ರಂದು 'ಭಾರತ ಬಂದ್‌'ಗೆ ಕರೆ ನೀಡಿವೆ. ಪರಿಣಾಮವಾಗಿ ಬ್ಯಾಂಕಿಂಗ್, ಸಾರಿಗೆ ಹಾಗೂ ಇತರ ಕೆಲವು ಸೇವೆಗಳಿಗೆ ಗುರುವಾರ ಅಡಚಣೆ ಉಂಟಾಗುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ಈ ಬಂದ್‌ಗೆ ಕರೆ ನೀಡಲಾಗಿದೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ಹೇಳಿದ್ದಾರೆ. ಮುಷ್ಕರವು ದೇಶದಾದ್ಯಂತ 600 ಜಿಲ್ಲೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ ಸಂಪೂರ್ಣ ಬೆಂಬಲದೊಂದಿಗೆ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್‌ಟಿಯುಸಿ), ಆಲ್‌ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ), ಹಿಂದ್ ಮಜ್ದೂರ್ ಸಭಾ (ಎಚ್‌ಎಂಎಸ್), ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ ಸೇರಿದಂತೆ 10 ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಕಳೆದ ವರ್ಷ (2025ರ ನವೆಂಬರ್‌) ಜಾರಿಗೆ ತಂದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಈ ಬಂದ್‌ಗೆ ಕರೆ ನೀಡಲಾಗಿದೆ. ಜತೆಗೆ ಬಿತ್ತನೆ ಬೀಜಗಳ ಮಸೂದೆ–2025, ವಿದ್ಯುತ್ ತಿದ್ದುಪಡಿ ಮಸೂದೆ ಮತ್ತು ಪರಮಾಣು ಶಕ್ತಿಯ ಸುಸ್ಥಿರ ಬಳಕೆ ಹಾಗೂ ಪ್ರಗತಿ ನಿಟ್ಟಿನಲ್ಲಿ ಭಾರತ ಪರಿವರ್ತನೆ (ಶಾಂತಿ) ಮಸೂದೆಯನ್ನು ‌ಹಿಂಪಡೆಯಬೇಕು ಎಂಬ ಬೇಡಿಕೆಗಳು ಸೇರಿವೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮರುಸ್ಥಾಪನೆ, ವಿಕ್ಷಿಸಿತ ಭಾರತ - ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ 2025 ರದ್ದತಿ ಮತ್ತು ಭಾರತ- ಅಮೆರಿಕ ನಡುವಿನ ಪ್ರಸ್ತಾವಿತ ವ್ಯಾಪಾರ ಒಪ್ಪಂದ ರದ್ದುಗೊಳಿಸುವಂತೆಯೂ ಬೇಡಿಕೆಯಿಟ್ಟಿವೆ.

ಒಡಿಶಾ ಮತ್ತು ಅಸ್ಸಾಂ ಸಂಪೂರ್ಣ ಬಂದ್‌ ಆಗಲಿದೆ. ಇತರ ರಾಜ್ಯಗಳ ಮೇಲೂ ಮುಷ್ಕರದ ಪರಿಣಾಮ ಬೀರಲಿದೆ ಎಂದು ಕೌರ್ ಹೇಳಿದ್ದಾರೆ.

ದೇಶದಾದ್ಯಂತ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ. ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ, ಶಿಕ್ಷಕರು ಮತ್ತು ವಿದ್ಯಾರ್ಥಿ ಸಂಘಟನೆಗಳು ಬಂದ್‌ಗೆ ತಮ್ಮ ಬೆಂಬಲ ಘೋಷಿಸಿವೆ. ಆಗಾಗಿ ಇಲ್ಲಿ ಶಾಲಾ– ಕಾಲೇಜುಗಳು ಮುಚ್ಚುವ ಸಾಧ್ಯತೆಯಿದೆ. ಅದೇ ರೀತಿ, ಸ್ಥಳೀಯ ಸಂಸ್ಥೆಗಳು ಬಂದ್‌ಗೆ ಬೆಂಬಲ ನೀಡಿದರೆ ಇತರ ರಾಜ್ಯಗಳ ಮೇಲೂ ಪರಿಣಾಮ ಬೀರಬಹುದು ಎಂದು ವರದಿಯಾಗಿದೆ.

ಸಾರಿಗೆ ಮತ್ತು ಬ್ಯಾಂಕಿಂಗ್‌ ಸೇವೆ
ಪ್ರತಿಭಟನೆ ಮತ್ತು ಸಂಭವನೀಯ ರಸ್ತೆ ತಡೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕ ಸಾರಿಗೆ ಸೇವೆಗಳು ಸಹ ವ್ಯತ್ಯಯಗೊಳ್ಳಬಹುದು. ಜತೆಗೆ ಮಾರುಕಟ್ಟೆ, ಅಂಗಡಿಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚಲ್ಪಡಬಹುದು.

ಬ್ಯಾಂಕಿಂಗ್ ಸೇವೆಗಳ ಮೇಲೆ ಬಂದ್‌ ಬಿಸಿ ತಟ್ಟುವ ಸಾಧ್ಯತೆಯಿದೆ.ಬ್ಯಾಂಕ್ ಆಫ್ ಬರೋಡಾ, ಎಸ್‌ಬಿಐ, ಪಿಎನ್‌ಬಿ ಮತ್ತು ಇನ್ನೂ ಅನೇಕ ಬ್ಯಾಂಕುಗಳು ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಆಸ್ಪತ್ರೆ ಮತ್ತು ಆಂಬುಲೆನ್ಸ್ ಸೇವೆಗಳು, ವಿಮಾನ ನಿಲ್ದಾಣಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಎಟಿಎಂ ಮತ್ತು ಆನ್‌ಲೈನ್‌ ಬ್ಯಾಂಕಿಂಗ್‌ ಸೇವೆ ಲಭ್ಯವಿರಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ